ಹೈದರಾಬಾದ್: ತೆಲಂಗಾಣದಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಹೆಚ್‌ಆರ್‌ಎಸ್) ಆಘಾತ ಅನುಭವಿಸಿದ್ದರೆ ಕಾಂಗ್ರೆಸ್ ಅದ್ಭುತ ಗೆಲುವು ದಾಖಲಿಸಿದೆ. ಇಲ್ಲಿ ಕಾಂಗ್ರೆಸ್ INC 64 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಬಿಆರ್‌ಎಸ್ 39 ಸ್ಥಾನಗಳನ್ನು ಗೆದ್ದು ಮುಖಭಂಗ ಅನುಭವಿಸಿದೆ. ಬಿಜೆಪಿ 8 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡರೆ, ಓವೈಸಿ ನೇತೃತ್ವದ ಎಐಎಂಐಎಂ 7ರಲ್ಲಿ ಗೆದ್ದಿದೆ. ಸಿಪಿಐ 1. ಒಟ್ಟು ಸ್ಥಾನ 119, ಬಹುಮತಕ್ಕೆ 60.
ಮುಖ್ಯಮಂತ್ರಿ ಸ್ಥಾನಕ್ಕೆ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎ.ರೇವಂತ ರೆಡ್ಡಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಬಟ್ಟಿ ವಿಕ್ರಮಾರ್ಕ ಅವರ ಹೆಸರು ಮುಂಚೂಣಿಯಲ್ಲಿದೆ. ಇತರ ನಾಯಕರಾದ ಎನ್.ಉತ್ತಮ್ ಕುಮಾರ್ ರೆಡ್ಡಿ, ಕೋಮಟಿ ರೆಡ್ಡಿ ವೆಂಕಟ ರೆಡ್ಡಿ ಮತ್ತು ದಾಮೋದರ್ ರಾಜನರಸಿಂಹ ಅವರೂ ಆಕಾಂಕ್ಷಿಗಳಾಗಿದ್ದಾರೆ.
ನಿಜವಾಯ್ತು ಮತಗಟ್ಟೆ ಸಮೀಕ್ಷೆ
ತೆಲಂಗಾಣದಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಹೆಚ್‌ಆರ್‌ಎಸ್) ಆಘಾತ ಅನುಭವಿಸಿದ್ದರೆ ಕಾಂಗ್ರೆಸ್ ಅದ್ಭುತ ಗೆಲುವು ದಾಖಲಿಸಿದೆ. ಇಲ್ಲಿ ಕಾಂಗ್ರೆಸ್ INC 64 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಬಿಆರ್‌ಎಸ್ 39 ಸ್ಥಾನಗಳನ್ನು ಗೆದ್ದು ಮುಖಭಂಗ ಅನುಭವಿಸಿದೆ. ಬಿಜೆಪಿ 8 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡರೆ, ಓವೈಸಿ ನೇತೃತ್ವದ ಎಐಎಂಐಎಂ 7ರಲ್ಲಿ ಗೆದ್ದಿದೆ. ಸಿಪಿಐ 1. ಒಟ್ಟು ಸ್ಥಾನ 119, ಬಹುಮತಕ್ಕೆ 60.
ಶಾಸಕರ ಹೈಜಾಕ್ ಭಯ: ಹೈದರಾಬಾದ್ ಹೋಟೆಲ್ ಹೊರಗೆ ಬಸ್‌ಗಳನ್ನು ಕಾಂಗ್ರೆಸ್ ಪಕ್ಷವು ಸನ್ನದ್ಧಗೊಳಿಸಿದೆ.
ಕಾಂಗ್ರೆಸ್ ಕಾರ್ಯವೈಖರಿ ಬಗ್ಗೆ ನಮಗೆಲ್ಲ ತಿಳಿದೇ ಇದೆ. ಶಾಸಕರನ್ನು ಹೈಜಾಕ್ ಮಾಡುವ ಭಯದಿಂದ ಬಸ್‌ಗಳನ್ನು ಕರೆಸಿದ್ದೆವು. ಈಗ ಫಲಿತಾಂಶದ ಟ್ರೆಂಡ್ ನೋಡುತ್ತಿದ್ದರೆ, ನಮ್ಮ ಪಕ್ಷ 80ಕ್ಕೂ ಅಧಿಕ ಸ್ಥಾನದಲ್ಲಿ ಗೆಲ್ಲುವ ಸಾಧ್ಯತೆ ಇದೆ. ಹೀಗಾಗಿ, ಬಸ್ ಅಗತ್ಯವಿಲ್ಲ ಎನಿಸುತ್ತಿದೆ ಎಂದು ಟಿಪಿಸಿಸಿ ಉಪಾಧ್ಯಕ್ಷ ಕಿರಣ್ ಕುಮಾರ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.