ಹೈದರಾಬಾದ್: ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಎಸ್‌ಆರ್‌ಟಿಸಿ) ನೌಕರರು ರಾಜ್ಯದಾದ್ಯಂತ ಶನಿವಾರ ಕರೆ ನೀಡಿದ್ದ ಬಂದ್‌ನಿಂದ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿತು.
15 ದಿನಗಳಿಂದ ಕೈಗೊಂಡಿದ್ದಅನಿರ್ದಿಷ್ಟಾವಧಿ ಮುಷ್ಕರದ ಅಂಗವಾಗಿ ಟಿಎಸ್‌ಆರ್‌ಟಿಸಿ ಜಂಟಿ ಕ್ರಿಯಾ ಸಮಿತಿ ಬಂದ್‌ಗೆ ಕರೆ ನೀಡಿತ್ತು. ಇತರ ರಾಜ್ಯಗಳ ಸರ್ಕಾರಿ ನೌಕರರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಬಂದ್‌ಗೆ ಬೆಂಬಲ ನೀಡಿದ್ದವು.
ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವೆಡೆ ಕಲ್ಲು ತೂರಾಟ ನಡೆದ ಪ್ರಕರಣಗಳು ವರದಿಯಾಗಿವೆ. ಆಟೊ ರಿಕ್ಷಾ ಮತ್ತು ಕ್ಯಾಬ್ ಸಂಘಟನೆಗಳು ಸಹ ಬಂದ್‌ಗೆ ಬೆಂಬಲ ಸೂಚಿಸಿದ್ದರಿಂದ ಆಟೊ ರಿಕ್ಷಾ ಮತ್ತು ಕ್ಯಾಬ್‌ಗಳು ಸಹ ಸಂಚರಿಸಲಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಹಾಜರಾತಿ ವಿರಳವಾಗಿತ್ತು.
ನೌಕರರ ಜತೆ ಮಾತುಕತೆ ನಡೆಸುಂತೆ ಶುಕ್ರವಾರ ಹೈಕೋರ್ಟ್ ಸೂಚಿಸಿದ್ದರೂ ಸರ್ಕಾರ ಯಾವುದೇ
ಕ್ರಮಕೈಗೊಳ್ಳಲಿಲ್ಲ. ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಸೂಚಿಸಿದ್ದಾರೆ.
ತೆಲಂಗಾಣ ಜನ ಸಮಿತಿ ನಾಯಕ ಪ್ರೊ. ಎಂ. ಕೋದಂಡರಾಮ್, ಟಿಡಿಪಿ ರಾಜ್ಯ ಘಟಕದ ಅಧ್ಯಕ್ಷ ಎಲ್. ರಮಣಾ, ಪ್ರಧಾನ ಕಾರ್ಯದರ್ಶಿ ರಾವುಲು ಚಂದ್ರಶೇಖರ್ ರೆಡ್ಡಿ ಮತ್ತು ಬಿಜೆಪಿ ನಾಯಕ ಮೊಥಕುಪಲ್ಲಿ ನರಸಿಂಹಲು ಸೇರಿದಂತೆ ಹಲವು ರಾಜಕೀಯ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ಮುಂಜಾಗ್ರತ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ.
ಅಸಾದುದ್ದೀನ್ ಓವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್–ಎ–ಇತ್ತೇಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷ ಬಂದ್‌ಗೆ ಬೆಂಬಲ ಸೂಚಿಸಿಲ್ಲ. ಟಿಆರ್‌ಎಸ್ ಮತ್ತು ರಾಜ್ಯ ಸರ್ಕಾರದ ಜತೆ ಓವೈಸಿ ಉತ್ತಮ ಸಂಬಂಧ ಹೊಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.