ಹೈದರಾಬಾದ್: ತೆಲಂಗಾಣದಲ್ಲಿ ನಾಮಪತ್ರ ಸಲ್ಲಿಸುವ ವೇಳೆ ಬಿಆರ್‌ಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದ್ದು ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸುವಾಗ ರಂಗಾ ರೆಡ್ಡಿ ಜಿಲ್ಲೆಯ ಇಬ್ರಾಹಿಂ ಪಟ್ಟಣಂನಲ್ಲಿ ಈ ಘಟನೆ ನಡೆದಿದೆ.
ಬಿಆರ್‌ಎಸ್ ಅಭ್ಯರ್ಥಿ ಕಿಶನ್ ರೆಡ್ಡಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಲ್ಲಾ ರೆಡ್ಡಿ ಅವರು ಏಕಕಾಲದಲ್ಲಿ ನಾಮಪತ್ರ ಸಲ್ಲಿಸಲು ಮುಂದಾದರು. ಈ ವೇಳೆ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಯಿತು. ಈ ಘಟನೆಯಲ್ಲಿ ಮಹಿಳೆ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಾಮಪತ್ರ ಕೇಂದ್ರದ ಹೊರಗೆ ಉಭಯ ಪಕ್ಷಗಳ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಹಲವಾರು ವಾಹನಗಳು ಜಖಂಗೊಂಡಿವೆ ಎಂದು ಪೊಲೀಸರು ಹೇಳಿದ್ದಾರೆ.
ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ತೆಲಂಗಾಣದಲ್ಲಿ ನವೆಂಬರ್ 30 ರಂದು ಚುನಾವಣೆ ನಡೆಯಲಿದೆ, ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.