ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ತೆಲಂಗಾಣ ಜನಸಮಿತಿ (ಟಿಜೆಎಸ್) ಸ್ಫರ್ಧೆಯಿಂದ ಹಿಂದೆ ಸರಿದಿದೆ.
ತೆಲಂಗಾಣ ಜನಸಮಿತಿ ಅಧ್ಯಕ್ಷ ಕೋದಂಡರಾಮ ಅವರು ತೆಲಂಗಾಣ ಕಾಂಗ್ರೆಸ್ ಘಟಕದ ಅಧ್ಯಕ್ಷ ರೇವಂತ್ ರೆಡ್ಡಿ ಅವರೊಂದಿಗೆ ಸಭೆ ನಡೆಸಿದ್ದು, ಕಾಂಗ್ರೆಸ್‌ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಜತೆಗೆ, ಈ ಬಾರಿ ಚುನಾವಣೆ ಸ್ಪರ್ಧೆಯಿಂದ ದೂರ ಉಳಿಯಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ವಿರುದ್ಧ ವಾಗ್ದಾಳಿ ನಡೆಸಿದ ಕೋದಂಡರಾಮ, ರಾಜ್ಯದಲ್ಲಿ ‘ನಿರಂಕುಶ ಮತ್ತು ಭ್ರಷ್ಟ’ ಆಡಳಿತವನ್ನು ತೊಲಗಿಸಬೇಕು. ಅದಕ್ಕಾಗಿಯೇ ಸಮಾನ ಮನಸ್ಥಿತಿಯ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವುದಾಗಿ ಅವರು ತಿಳಿಸಿದ್ದಾರೆ.
ನಿರುದ್ಯೋಗ ನಿವಾರಣೆ ಮತ್ತು ರಾಜ್ಯವನ್ನು ಅಭಿವೃದ್ಧಿಪಡಿಸುವ ಕುರಿತು ಕಾಂಗ್ರೆಸ್ ನೀಡಿರುವ ಭರವಸೆಗಳ ಬಗ್ಗೆ ಕೋದಂಡರಾಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೆಸಿಆರ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್), ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಪೈಪೋಟಿ ಏರ್ಪಟ್ಟಿದೆ.
119 ಸ್ಥಾನಗಳ ತೆಲಂಗಾಣ ವಿಧಾನಸಭೆಗೆ ನವೆಂಬರ್ 30ರಂದು ಚುನಾವಣೆ ನಡೆಯಲಿದ್ದು, ಡಿ.3ರಂದು ಮತ ಎಣಿಕೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.