ಹೈದರಾಬಾದ್: ತೆಲಂಗಾಣ ಸರ್ಕಾರವು ನವೆಂಬರ್ ಮೊದಲ ವಾರದಲ್ಲಿ ಜಾತಿ ಸಮೀಕ್ಷೆ ಪ್ರಾರಂಭಿಸುವ ನಿರೀಕ್ಷೆಯಿದೆ. ತಿಂಗಳ ಅಂತ್ಯದೊಳಗೆ ಅದನ್ನು ಪೂರ್ಣಗೊಳಿಸುವ ಸಾಧ್ಯತೆಯಿದೆ ಎಂದು ಸಚಿವ ಪೊನ್ನಂ ಪ್ರಭಾಕರ್ ಹೇಳಿದರು.
ಸಚಿವ ಸಂಪುಟ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ರಾಜ್ಯ ಹಾಗೂ ರಾಷ್ಟ್ರದಾದ್ಯಂತ ಜಾತಿ ಸಮೀಕ್ಷೆ ನಡೆಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬದ್ಧತೆಗೆ ಅನುಗುಣವಾಗಿ ಜಾತಿ ಸಮೀಕ್ಷೆ ನಡೆಸಲಾಗುತ್ತದೆ’ ಎಂದರು.
‘ಸಮೀಕ್ಷೆ ನಡೆಸಲು 80 ಸಾವಿರ ಸರ್ಕಾರಿ ನೌಕರರನ್ನು ನಿಯೋಜಿಸಲಾಗುವುದು ಮತ್ತು ಅವರಿಗೆ ಸೂಕ್ತ ತರಬೇತಿ ನೀಡಲಾಗುತ್ತದೆ’ ಎಂದು ಪ್ರಭಾಕರ್ ಹೇಳಿದರು.
‘ರಾಜ್ಯ ವಿಧಾನಸಭೆಯಲ್ಲಿ ಅಂಗೀಕರಿಸಿದ ನಿರ್ಣಯದ ಪ್ರಕಾರ, ರಾಜ್ಯ ಸಚಿವ ಸಂಪುಟವು ಜಾತಿ ಸಮೀಕ್ಷೆಯನ್ನು ನವೆಂಬರ್ 4 ಅಥವಾ 5 ರಿಂದ ಪ್ರಾರಂಭಿಸುವ ನಿರೀಕ್ಷೆಯಿಟ್ಟುಕೊಂಡಿದ್ದು, ನವೆಂಬರ್ 30ರೊಳಗೆ ಪೂರ್ಣಗೊಳಿಸುವ ಸಾಧ್ಯತೆಯಿದೆ’ ಎಂದರು.
‘ಸಂಗ್ರಹಿಸಿದ ಎಲ್ಲ ದತ್ತಾಂಶಗಳನ್ನು ಸಾರ್ವಜನಿಕಗೊಳಿಸಲಾಗುತ್ತದೆ(kept in public domain)’ ಎಂದು ತಿಳಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.