ADVERTISEMENT

ತೆಲಂಗಾಣ: ಬಿಆರ್‌ಎಸ್‌ ಶಾಸಕಿ ಲಾಸ್ಯ ನಂದಿತಾ ರಸ್ತೆ ಅಪಘಾತದಲ್ಲಿ ಸಾವು

ಪಿಟಿಐ
Published 23 ಫೆಬ್ರುವರಿ 2024, 5:02 IST
Last Updated 23 ಫೆಬ್ರುವರಿ 2024, 5:02 IST
<div class="paragraphs"><p>ತೆಲಂಗಾಣದ ಬಿಆರ್‌ಎಸ್ ಪಕ್ಷದ ಶಾಸಕಿ ಲಾಸ್ಯ ನಂದಿತಾ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು.&nbsp;</p></div>

ತೆಲಂಗಾಣದ ಬಿಆರ್‌ಎಸ್ ಪಕ್ಷದ ಶಾಸಕಿ ಲಾಸ್ಯ ನಂದಿತಾ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು. 

   

ಹೈದರಾಬಾದ್‌: ತೆಲಂಗಾಣದ ಬಿಆರ್‌ಎಸ್ ಪಕ್ಷದ ಶಾಸಕಿ ಲಾಸ್ಯ ನಂದಿತಾ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು. 

ಇಲ್ಲಿನ ಔಟರ್‌ ರಿಂಗ್‌ ರೋಡ್‌ನಲ್ಲಿ ನಂದಿತಾ ಪ್ರಯಾಣಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಅಪಘಾತದಲ್ಲಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾಸ್ಯ ನಂದಿತಾ ಅವರು ಸಿಕಂದರಾಬಾದ್ ಕಂಟೋನ್ಮೆಂಟ್‌ (ಪ.ಜಾತಿ) ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.