ನವದೆಹಲಿ: ತೆಲಂಗಾಣದ ನಿಯೋಜಿತ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಇಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ.
ನಂತರ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ನಾಯಕ ರಾಹುಲ್ ಗಾಂಧಿ ಅವರನ್ನೂ ಭೇಟಿ ಮಾಡಿದ್ದಾರೆ.
ಕೊಡಂಗಲ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ರೆಡ್ಡಿ, ಹೈದರಾಬಾದ್‌ನಲ್ಲಿ ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇಂದು ಸಂಜೆಯೊಳಗೆ ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಮಲ್ಕಜೆಗಿರಿ ಲೋಕಸಭಾ ಕ್ಷೇತ್ರದಿಂದ ರೆಡ್ಡಿ ಆಯ್ಕೆಯಾಗಿದ್ದರು.
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಆರ್‌ಎಸ್ ಪಕ್ಷವನ್ನು ಪರಾಭವಗೊಳಿಸಿ ಕಾಂಗ್ರೆಸ್ 64 ಕ್ಷೇತ್ರಗಳನ್ನು ಗೆದ್ದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.