ಉಧಗಮಂಡಲಮ್: ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣ ಊಟಿಯಲ್ಲಿ ಚಳಿ ಹೆಚ್ಚಾಗಿದ್ದು, ತಾಪಮಾನವು 1 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದೆ.
ಬೆಳಗ್ಗೆ 8.30 ಗಂಟೆಯ ಬಳಿಕವಷ್ಟೇ ಪ್ರವಾಸಿಗರು ಮತ್ತು ಸ್ಥಳೀಯರು ಮನೆ, ವಸತಿ ಗೃಹಗಳಿಂದ ಹೊರಬರುತ್ತಿದ್ದು, ವಿಪರೀತ ಚಳಿಯು ಜನರನ್ನು ಮನೆಯೊಳಗೆ ಇರುವಂತೆ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.
ಸಾಂದಿನಲ್ಲ, ಗ್ಲೆನ್‌ಮೋರ್ಗಾನ್, ಥಲಕುಂಡ ಪ್ರದೇಶಗಳಲ್ಲಿ ಉಷ್ಣಾಂಶವು ತೀವ್ರವಾಗಿ ಇಳಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.