ADVERTISEMENT

ಪಟಾಕಿ ಅವಘಡ: ಸರ್ಕಾರದಿಂದ ಚಿಕಿತ್ಸಾ ವೆಚ್ಚ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2024, 15:53 IST
Last Updated 30 ಅಕ್ಟೋಬರ್ 2024, 15:53 IST
<div class="paragraphs"><p>ಸ್ಫೋಟ</p></div>

ಸ್ಫೋಟ

   

(ಐಸ್ಟೋಕ್ ಚಿತ್ರ)

ತಿರುವನಂತಪುರ: ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅಞೂಟ್ಟಂಬಲಂ ವೀರರ್‌ಕಾವ್ ದೇವಸ್ಥಾನದಲ್ಲಿ ಸಂಭವಿಸಿದ ಪಟಾಕಿ ಸ್ಫೋಟದಲ್ಲಿ ಗಾಯಗೊಂಡಿರುವ 154 ಮಂದಿಯ ಚಿಕಿತ್ಸಾ ವೆಚ್ಚ ಭರಿಸಲು ಕೇರಳ ಸರ್ಕಾರ ಬುಧವಾರ ನಿರ್ಧರಿಸಿದೆ.

ADVERTISEMENT

ಈ ಕುರಿತ ನಿರ್ಧಾರವನ್ನು ಬುಧವಾರ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಯಿತು ಎಂದು ಮುಖ್ಯಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ. ಗಾಯಗೊಂಡ 154 ಮಂದಿ ಪೈಕಿ 8 ಜನರ ಸ್ಥಿತಿ ಗಂಭೀರವಾಗಿದೆ.

ಈ ಅವಘಡ ಕುರಿತ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ. ಅಲ್ಲದೆ ಪ್ರತ್ಯೇಕ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಹೆಚ್ಚುವರಿ ವಿಭಾಗೀಯ ಮ್ಯಾಜಿಸ್ಟ್ರೇಟ್‌ಗೂ ಸರ್ಕಾರ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.