ಪಕುರ್ (ಜಾರ್ಖಂಡ್): ‘ಅಯೋಧ್ಯೆಯಲ್ಲಿ ಮುಂದಿನ ನಾಲ್ಕು ತಿಂಗಳಲ್ಲಿ ಗಗನಚುಂಬಿ ಶ್ರೀರಾಮ ದೇವಸ್ಥಾನ ನಿರ್ಮಾಣವಾಗಲಿದೆ. ಇದು, ವಿಶ್ವದಾದ್ಯಂತ ಇರುವ ಹಿಂದೂಗಳ 100 ವರ್ಷಗಳ ಬೇಡಿಕೆಯೂ ಆಗಿತ್ತು’ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಪಕ್ಷದ ಅಭ್ಯರ್ಥಿ ಪರ ಪ್ರಚಾರ ಭಾಷಣ ಮಾಡುತ್ತಿದ್ದ ಅವರು, ರಾಮಜನ್ಮಭೂಮಿ ಪ್ರಕರಣವನ್ನು ಸುಪ್ರೀಂ ಕೋರ್ಟ್‌ನಲ್ಲಿ ದೀರ್ಘಾವಧಿಯವರೆಗೂ ಎಳೆದದ್ದು ಏಕೆ?’ ಎಂದು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಅವರನ್ನು ತರಾಟೆ ತೆಗೆದುಕೊಂಡರು.
ಇಂದಿಗೂ ಬೆನ್ನಿಗೆ ಚೂರಿ ಹಾಕುವವರು ಇದ್ದಾರೆ. ಅವರು ನಿಮ್ಮ ಪ್ರತಿನಿಧಿ ಆಗಬಾರದು. ಕಾಂಗ್ರೆಸ್‌ನಿಂದ ಅಭಿವೃದ್ಧಿ ಅಸಾಧ್ಯ. 56 ಇಂಚಿನ ಎದೆಯುಳ್ಳ ನರೇಂದ್ರ ಮೋದಿ ಅವರಿಂದ ನಿಮ್ಮ ರಕ್ಷಣೆ, ಅಭಿವೃದ್ಧಿ ಸಾಧ್ಯ’ ಎಂದು ಯಾರ ಹೆಸರನ್ನೂ ಉಲ್ಲೇಖಿಸದೇ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.