ನವದೆಹಲಿ: ಇತ್ತೀಚೆಗೆ ಮುಕ್ತಾಯವಾದ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಗೆದ್ದು ಶಾಸಕರಾಗಿ ಆಯ್ಕೆಯಾಗಿರುವ ಬಿಜೆಪಿಯ 10 ಮಂದಿ ಸಂಸತ್ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.
ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಪಟೇಲ್ ಹಾಗೂ ರಾಜ್ಯವರ್ಧನ್ ಸಿಂಗ್ ರಾಥೋಡ್, ದಿಯಾ ಕುಮಾರಿ, ರೇಣುಕಾ ಸಿಂಗ್ ಅವರೂ ರಾಜೀನಾಮೆ ನೀಡಿದವರ ಪಟ್ಟಿಯಲ್ಲಿದ್ದಾರೆ.
ಇನ್ನಿಬ್ಬರು ಸಂಸದರಾದ ರೇಣುಕಾ ಸಿಂಗ್, ಮಹಂತ್ ಬಾಲಾಕನಾಥ್ ಕೂಡ ಶೀಘ್ರದಲ್ಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಢದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಸಾಧಿಸಿದೆ. ಈ ರಾಜ್ಯಗಳಲ್ಲಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವುದರ ನಡುವೆಯೇ ಸಂಸದರು ರಾಜೀನಾಮೆ ನೀಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.