ADVERTISEMENT

ಮಹಾರಾಷ್ಟ್ರ | ಆರ್‌ಎಸ್‌ಎಸ್‌ ಪಥಸಂಚಲನ: ಪರಿಸ್ಥಿತಿ ಉದ್ವಿಗ್ನ

ಪಿಟಿಐ
Published 12 ಅಕ್ಟೋಬರ್ 2024, 12:32 IST
Last Updated 12 ಅಕ್ಟೋಬರ್ 2024, 12:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮಹಾರಾಷ್ಟ್ರದ ರತ್ನಗಿರಿ ನಗರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಪಥ ಸಂಚಲನ ನಡೆಯುತ್ತಿದ್ದ ವೇಳೆ ಅಲ್ಪಸಂಖ್ಯಾತರು ಘೋಷಣೆ ಕೂಗಿದ ಪರಿಣಾಮ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

‘ಕೊಂಕಣ್‌ ನಗರ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಈ ಸಂಬಂಧ ಎರಡು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಅಶಾಂತಿಗೆ ಕಾರಣವಾದ ಐವರನ್ನು ಗುರುತಿಸಲಾಗಿದ್ದು, ಅವರಿಗೆ ನೋಟಿಸ್ ನೀಡಲಾಗಿದೆ. ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

‘ಪಥಸಂಚಲನದ ವೇಳೆ ವಿರುದ್ಧವಾದ ಘೋಷಣೆಗಳನ್ನು ಕೂಗುವ ಮೂಲಕ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟು ಮಾಡಲಾಗಿದೆ ಎಂದು ಆರೋಪಿಸಿ ಸಂಘಟನೆಯವರು ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

‘ಯಾವುದೇ ರೀತಿಯ ಹಿಂಸಾಚಾರ ನಡೆದಿಲ್ಲ, ಆದರೆ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧದ ಪ್ರಾಥಮಿಕ ವರದಿಯನ್ನು ನೀಡಬೇಕು ಎಂದು ಆಗ್ರಹಿಸಿ ಹಲವರು ಪೊಲೀಸ್‌ ಠಾಣೆಯ ಮುಂದೆ ಧರಣಿ ನಡೆಸಿದ್ದಾರೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.