ಬರ್ಮೇರ್ : ರಾಜಸ್ಥಾನದ ಬರ್ಮೇರ್ನಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಬಲವಾದ ಗಾಳಿ ಬೀಸಿದ ಪರಿಣಾಮ ಶಾಮಿಯಾನ ಬಿದ್ದು, 14 ಮಂದಿ ಮೃತಪಟ್ಟಿದ್ದಾರೆ. 50 ಮಂದಿಗೆ ಗಾಯಗಳಾಗಿದ್ದು ಕೆಲವರ ಪರಿಸ್ಥಿತಿ ಗಂಭೀರವಾಗಿದೆ.
ಜೈಪುರದಿಂದ 500 ಕಿಮೀ ದೂರದಲ್ಲಿರುವ ಶಾಲೆಯೊಂದರ ಮೈದಾನದಲ್ಲಿ ಈ ಘಟನೆ ನಡೆದಿದೆ.ರಾಮಕಥಾ ನಡೆಯುವ ವೇಳೆ ಜೋರಾಗಿ ಗಾಳಿ ಬೀಸುತ್ತಿದ್ದಂತೆ ಜನರು ಅಲ್ಲಿಂದ ಸುರಕ್ಷಿತ ಜಾಗಕ್ಕೆ ಸೇರುವಂತೆ ವ್ಯಕ್ತಿಯೊಬ್ಬರು ಸೂಚಿಸುತ್ತಿರುವ ದೃಶ್ಯ ವಿಡಿಯೊದಲ್ಲಿದೆ.
ಜಿಲ್ಲಾಡಳಿತದ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಘಟನೆ ಬಗ್ಗೆ ಸ್ಥಳೀಯ ಆಡಳಿತಾಧಿಕಾರಿಗಳು ತನಿಖೆ ನಡೆಸಬೇಕೆಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.