ADVERTISEMENT

ಕುಪ್ವಾರದಲ್ಲಿ ಉಗ್ರರ ಸಹಚರನ ಬಂಧನ: ಶಸ್ತ್ರಾಸ್ತ್ರ, ಮದ್ದುಗುಂಡು ವಶ

​ಪ್ರಜಾವಾಣಿ ವಾರ್ತೆ
Published 16 ಮೇ 2024, 14:43 IST
Last Updated 16 ಮೇ 2024, 14:43 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಗುರುವಾರ ಉಗ್ರರ ಸಹಚರನನ್ನು ಬಂಧಿಸಿದ್ದು, ಆತನಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಇಲ್ಲಿ ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸೇನೆ, ಬಿಎಸ್‌ಎಫ್ ಮತ್ತು ಪೊಲೀಸರ ಜಂಟಿ ತಂಡವು, ಬಾರಾಮುಲ್ಲಾ ಲೋಕಸಭಾ ಕ್ಷೇತ್ರದ ಭಾಗವಾಗಿರುವ ಕುಪ್ವಾರ ಜಿಲ್ಲೆಯಲ್ಲಿ ಇದೇ 20ರಂದು ನಡೆಯಲಿರುವ ಮತದಾನಕ್ಕೆ ಕೇವಲ ನಾಲ್ಕು ದಿನಗಳ ಮೊದಲು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ.  

ಕುಪ್ವಾರಾ ಜಿಲ್ಲೆಯ ಲೋನ್ ಹರಿಯಲ್ಲಿ ಭಯೋತ್ಪಾದಕರ ಸಹಚರ ಮುಷ್ತಾಕ್ ಅಹ್ಮದ್ ಲೋನ್ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯಿಂದ ಮ್ಯಾಗಜಿನ್‌ಗಳ ಸಹಿತ ಎರಡು ಪಿಸ್ತೂಲ್‌ಗಳು, 10 ಹ್ಯಾಂಡ್ ಗ್ರೆನೇಡ್‌ಗಳು ಮತ್ತು ಒಂಬತ್ತು ಎಂಎಂನ 54 ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.