ADVERTISEMENT

ಕಾಶ್ಮೀರದಲ್ಲಿ ಉಗ್ರರ ದಾಳಿ | ಹೇಡಿತನದ ಕೃತ್ಯ: ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2024, 4:56 IST
Last Updated 21 ಅಕ್ಟೋಬರ್ 2024, 4:56 IST
ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ   

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿಯನ್ನು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಖಂಡಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಅಮಾಯಕ ನಾಗರಿಕರನ್ನು ಹತ್ಯೆ ಮಾಡಿರುವುದು ಹೇಡಿತನದ ಕೃತ್ಯ. ಇದು ಮಾನವೀಯತೆ ವಿರುದ್ಧದ ಅಪರಾಧವಾಗಿದೆ ಎಂದು ವಾದ್ರಾ ಆಕ್ರೋಶ ವ್ಯಕ್ತ‍ಪಡಿಸಿದ್ದಾರೆ.

ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಿಯಾಂಕಾ, ಈ ಘಟನೆಯಲ್ಲಿ ಗಾಯಗೊಂಡಿರುವವರು ಶೀಘ್ರ ಚೇತರಿಕೆಯಾಗಲಿ ಎಂದು ಹೇಳಿದ್ದಾರೆ.

ADVERTISEMENT

ಕಾಶ್ಮೀರದ ಗಾಂದರಬಲ್‌ ಜಿಲ್ಲೆಯಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಐವರು ಕಾರ್ಮಿಕರು, ಒಬ್ಬ ವೈದ್ಯ ಸೇರಿ 6 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಗುಂಡ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದ ಸಮೀಪ ಭಾನುವಾರ ಸಂಜೆ ಈ ದಾಳಿ ನಡೆದಿದೆ. ರ್ಮಾಣ ಗುತ್ತಿಗೆ ಪಡೆದಿರುವ ಖಾಸಗಿ ಕಂಪನಿಯು ಕಾರ್ಮಿಕರ ವಾಸಕ್ಕೆ ನಿರ್ಮಿಸಿರುವ ಮನೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.