ADVERTISEMENT

ಪುಲ್ವಾಮದಲ್ಲಿ ಎನ್‌ಕೌಂಟರ್‌: ಒಬ್ಬ ಉಗ್ರ, ಯೋಧ ಸಾವು

ಪಿಟಿಐ
Published 12 ಆಗಸ್ಟ್ 2020, 6:22 IST
Last Updated 12 ಆಗಸ್ಟ್ 2020, 6:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ‍ಪುಲ್ವಾಮ ಜಿಲ್ಲೆಯಲ್ಲಿಬುಧವಾರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಇದೇ ವೇಳೆ ಉಗ್ರನೊಬ್ಬ ಹತನಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದರು.

‘ನಿಖರ ಮಾಹಿತಿ ಮೇರೆಗೆ ಭದ್ರತಾ ಪಡೆಯ ಸಿಬ್ಬಂದಿ ಪುಲ್ವಾಮ ಜಿಲ್ಲೆಯಕಮ್ರಾಜಿಪೊರಾದಲ್ಲಿ ಶೋಧಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಉಗ್ರರು ದಾಳಿ ನಡೆಸಿದ್ದರಿಂದ ಭದ್ರತಾ ಪಡೆಗಳ ಯೋಧರು ಪ್ರತಿ ದಾಳಿ ನಡೆಸಿದರು. ಈ ಗುಂಡಿನ ಚಕಮಕಿಯಲ್ಲಿ ಸೈನಿಕರಿಬ್ಬರು ಗಂಭೀರ ಗಾಯಗೊಂಡರು. ತಕ್ಷಣವೇ ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಯೋಧರೊಬ್ಬರು ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು’ ಎಂದು ಅವರು ಮಾಹಿತಿ ನೀಡಿದರು.

ಇನ್ನೂ, ಮೃತ ಉಗ್ರಯಾವ ಸಂಘಟನೆಗೆ ಸೇರಿದವನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಎನ್‌ಕೌಂಟರ್‌ ನಡೆದ ಪ್ರದೇಶದಲ್ಲಿ ಎ.ಕೆ 47 ರೈಫಲ್‌ ಮತ್ತು ಕೆಲ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.