ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಈ ವೇಳೆ ಒಬ್ಬ ಉಗ್ರನನ್ನು ಸೇನೆ ಸದೆಬಡಿದಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಕುಪ್ವಾರ ಜಿಲ್ಲೆಯ ಲೋಲಾಬ್ ಎಂಬಲ್ಲಿ ಕೆಲವು ದಿನಗಳಿಂದ ಉಗ್ರರ ಚಟುವಟಿಕೆಗಳು ನಡೆಯುತ್ತಿರಬಹುದು ಎಂಬ ಮಾಹಿತಿ ಮೇರೆಗೆ ಈ ಭಾಗದಲ್ಲಿ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ಕೈಗೊಂಡಿದ್ದರು. ಉಗ್ರರು ಅಡಗಿರುವ ಸ್ಥಳವನ್ನು ಪತ್ತೆಹಚ್ಚಿದ ಸೇನೆ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಸೇನೆಯು ಪ್ರತಿದಾಳಿ ನಡೆಸಿತು.
ಈ ಘಟನೆಯಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಯಿತು. ಆದರೆ, ಗಾಯಗೊಂಡಿದ್ದ ಸೇನಾ ಯೋಧ ಬಳಿಕ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.