ADVERTISEMENT

ಕಾಶ್ಮೀರ | ಗಡಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲ; ಇಬ್ಬರು ಉಗ್ರರ ಹತ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಸೆಪ್ಟೆಂಬರ್ 2024, 2:34 IST
Last Updated 9 ಸೆಪ್ಟೆಂಬರ್ 2024, 2:34 IST
<div class="paragraphs"><p>ಜಮ್ಮು ಮತ್ತು ಕಾಶ್ಮೀರದಲ್ಲಿ ನಿಗಾ ವಹಿಸಿದ್ದ ಸೇನಾ ಸಿಬ್ಬಂದಿ  </p></div>

ಜಮ್ಮು ಮತ್ತು ಕಾಶ್ಮೀರದಲ್ಲಿ ನಿಗಾ ವಹಿಸಿದ್ದ ಸೇನಾ ಸಿಬ್ಬಂದಿ

   

-ಪಿಟಿಐ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೇರಾ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪಾಕಿಸ್ತಾನದ ಕಡೆಯಿಂದ ಒಳನುಸುಳುವ ಯತ್ನವನ್ನು ವಿಫಲಗೊಳಿಸಿರುವ ಭದ್ರತಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಉಗ್ರರ ವಿರುದ್ಧದ ಕಾರ್ಯಾಚರಣೆ ಕುರಿತು ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ಘಟಕ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದು, ‘ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯ ಭಾಗವಾಗಿ ಭಾನುವಾರ ಮಧ್ಯರಾತ್ರಿ ನೌಶೇರಾ ವಲಯದ ಲ್ಯಾಮ್‌ನ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ತಿಳಿಸಿದೆ.

ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಡೋಡಾ ಜಿಲ್ಲೆಯ ಎತ್ತರದ ಪ್ರದೇಶಗಳ ವಿವಿಧೆಡೆ ಜೂನ್‌ 12ರಿಂದ ಈವರೆಗೆ ಅರ್ಧ ಡಜನ್‌ಗಿಂತಲೂ ಹೆಚ್ಚು ಬಾರಿ ಉಗ್ರರ ದಾಳಿಗಳು ನಡೆದಿವೆ. ಈ ದಾಳಿಗಳಲ್ಲಿ ಒಬ್ಬರು ಕ್ಯಾಪ್ಟನ್‌ ಸೇರಿ ನಾಲ್ವರು ಸೈನಿಕರು ಹುತಾತ್ಮರಾಗಿದ್ದರು. ಈ ವೇಳೆ ಭದ್ರತಾ ಪಡೆಗಳು ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ವಿದೇಶಿ ಉಗ್ರರು ಹತರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.