ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗ್ರೆನೇಡ್ ಎಸೆದು ಉಗ್ರರು ಪರಾರಿಯಾಗಿರುವ ಘಟನೆ ಬುಧವಾರ ವರದಿಯಾಗಿದೆ.
ಮಂಗಳವಾರ ರಾತ್ರಿ ಶೋಪಿಯಾನ್ ಜಿಲ್ಲೆಯ ಕುತ್ಪೋರ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನುಪ್ರಾರಂಭಿಸಿತ್ತು.
ಪ್ರದೇಶವನ್ನು ಭದ್ರತಾ ಪಡೆ ಸುತ್ತುವರಿದ ಸಂದರ್ಭದಲ್ಲಿ ಗ್ರೆನೇಡ್ ದಾಳಿ ನಡೆಸಿದ ಉಗ್ರರು ರಾತ್ರಿ ಕತ್ತಲೆಯ ಮರೆಯಲ್ಲಿ ಪರಾರಿಯಾದರು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಆದರೂ ಉಗ್ರರ ಅಡಗುತಾಣವನ್ನು ನಾಶಗೊಳಿಸಿರುವ ಭದ್ರತಾ ಪಡೆ, ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ.
ಸೋಮವಾರ ಸಂಜೆ ಸಿಆರ್‌ಪಿಎಫ್ ಬಂಕರ್ ಮೇಲೆ ಉಗ್ರರು ದಾಳಿ ನಡೆಸಿದ್ದರು. ಮಂಗಳವಾರ ಉಗ್ರರ ಗುಂಡಿನ ದಾಳಿಗೆ ಕಾಶ್ಮೀರಿ ಪಂಡಿತರೊಬ್ಬರು ಸಾವನ್ನಪ್ಪಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.