ADVERTISEMENT

ರೈಲ್ವೆ ರಕ್ಷಣಾ ಪಡೆಯ ಏಳು ಮಂದಿಗೆ ಕೋವಿಡ್-19, 100 ಜನರು ಕ್ವಾರಂಟೈನ್

ಏಜೆನ್ಸೀಸ್
Published 26 ಮೇ 2020, 9:45 IST
Last Updated 26 ಮೇ 2020, 9:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಲುಧಿಯಾನ: ಲುಧಿಯಾನ ರೈಲ್ವೆ ನಿಲ್ದಾಣದಲ್ಲಿ ನಿಯೋಜಿಸಲಾಗಿದ್ದ ಏಳು ಮಂದಿ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿಗೆ ಮಂಗಳವಾರ ಕೋವಿಡ್-19 ದೃಢಪಟ್ಟಿದ್ದು, ಆರ್‌ಪಿಎಫ್ ಮಹಾನಿರ್ದೇಶಕರಿಗೆ ಮಾಹಿತಿ ನೀಡಿದ್ದಾರೆ.

ಲುಧಿಯಾನ ರೈಲ್ವೆ ನಿಲ್ದಾಣದಲ್ಲಿ ನಿಯೋಜಿಸಲಾಗಿದ್ದ ಆರ್‌ಪಿಎಫ್ ಸಿಬ್ಬಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಏಳು ಆರ್‌ಪಿಎಫ್ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ ಮತ್ತು 100 ಜನರನ್ನು ಈಗಾಗಲೇ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ಎಂದು ಡಿಜಿ ತಿಳಿಸಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ADVERTISEMENT

ಪಂಜಾಬ್‌ನಲ್ಲಿ ಸೋಮವಾರ 21 ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,081ಕ್ಕೆ ಏರಿಕೆಯಾಗಿದೆ. ಅಮೃತಸರದಿಂದ 10, ಜಲಂಧರ್‌ನಿಂದ 6 ಮತ್ತು ತರ್ನ ತರನ್, ಕರ್ತಾರ್‌ಪುರದಿಂದ ತಲಾ ಒಂದೊಂದು ಪ್ರಕರಣ ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.