ನವದೆಹಲಿ: ಕೊಕೇನ್ ಅನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಆರೋಪದ ಮೇಲೆ ಥಾಯ್ಲೆಂಡ್ ಮಹಿಳೆಯೊಬ್ಬರನ್ನು ರಾಷ್ಟ್ರ ರಾಜಧಾನಿ ದೆಹಲಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ.
ಜುಲೈ 23ರಂದು ಬ್ಯಾಂಕಾಕ್‌ನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಹಿಳೆ ಮತ್ತು ಆಕೆಯ ಲಗೇಜ್ ಅನ್ನು ಶೋಧ ನಡೆಸಲಾಯಿತು. ಈ ವೇಳೆ ಆಕೆಯ ಬ್ಯಾಗ್‌ನ ಪಿಂಗಾಣಿ ಸೆಟ್‌ನಲ್ಲಿ ಬಚ್ಚಿಟ್ಟಿದ್ದ ₹48 ಕೋಟಿ ಮೌಲ್ಯದ 3.12 ಕೆ.ಜಿ ಕೊಕೇನ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಇಲಾಖೆ ಹೇಳಿದೆ.
ಮಹಿಳೆಯನ್ನು ಬಂಧಿಸಲಾಗಿದ್ದು, ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.