ಥಾಣೆ: ವೈಜ್ಞಾನಿಕ ಉಪಕರಣಗಳನ್ನು ತಯಾರಿಸುವ ಥಾಣೆಯ ಫ್ಯಾಕ್ಟರಿಯೊಂದರಲ್ಲಿ ಶನಿವಾರ ತಡರಾತ್ರಿ ಅಗ್ನಿ ದುರಂತ ಸಂಭವಿಸಿದೆ.
ಗ್ಯಾಸ್ ಸಿಲಿಂಡರ್‌ಗಳನ್ನು ಜೋಡಿಸಿರುವ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅದು ಇತರೆಡೆಗೂ ವ್ಯಾಪಿಸಿದೆ ಎಂದು ಥಾಣೆ ನಗರ ಪಾಲಿಕೆಯ ಅಧಿಕಾರಿ ಅವಿನಾಶ್ ಸಾವಂತ್ ತಿಳಿಸಿದ್ದಾರೆ.
ಬೆಂಕಿ ನಂದಿಸುವ ಕಾರ್ಯ ಆರಂಭಿಸಲಾಗಿದೆ. ಯಾವುದೇ ಸಾವು–ನೋವು ವರದಿಯಾಗಿಲ್ಲ ಎಂದು ಸಾವಂತ್ ಹೇಳಿದ್ದಾರೆ.
ಬೆಂಕಿ ತಗುಲಿ, ಸಿಲಿಂಡರ್ ಸ್ಫೋಟಗೊಂಡಿದೆ. ಇದರಿಂದಾಗಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ವ್ಯಾಪಿಸಿದೆ. ಸ್ಫೋಟದ ಶಬ್ಧಕ್ಕೆ ಹೆದರಿ ಜನರು ಮನೆಯಿಂದ ಹೊರಗಡೆ ಓಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಎರಡು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.