ADVERTISEMENT

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ: ರಾಜ್ಯದ ಕ್ರಮಕ್ಕೆ ಶಶಿ ತರೂರ್ ಆಕ್ಷೇಪ

ಪಿಟಿಐ
Published 19 ಜುಲೈ 2024, 10:38 IST
Last Updated 19 ಜುಲೈ 2024, 10:38 IST
<div class="paragraphs"><p>ಶಶಿ ತರೂರ್, ಸಿದ್ದರಾಮಯ್ಯ</p></div>

ಶಶಿ ತರೂರ್, ಸಿದ್ದರಾಮಯ್ಯ

   

ತಿರುವನಂತಪುರ: ರಾಜ್ಯದ ಖಾಸಗಿ ಉದ್ಯಮಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಯನ್ನು ಮಂಡಿಸಿ ಜಾರಿ ಮಾಡಲು ಹೊರಟಿದ್ದ ರಾಜ್ಯ ಸರ್ಕಾರದ ಕ್ರಮವು ಸಂವಿಧಾನ ವಿರೋಧ ಹಾಗೂ ವಿವೇಚನಾರಹಿತ ಕ್ರಮ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಜತೆಗೆ, ಘೋಷಿಸಿದ ಕ್ರಮದಿಂದ ಹಿಂದೆ ಸರಿದ ಸಿದ್ದರಾಮಯ್ಯ ಸರ್ಕಾರದ ಕ್ರಮ ಕುರಿತೂ ತರೂರ್ ಸಂತಸ ವ್ಯಕ್ತಪಡಿಸಿದ್ದಾರೆ. 

ADVERTISEMENT

‘ಸಂವಿಧಾನದ ಪ್ರಕಾರ ದೇಶದ ಪ್ರತಿಯೊಬ್ಬ ಪ್ರಜೆಗೂ ದೇಶದೊಳಗೆ ಸ್ವತಂತ್ರವಾಗಿ ಬದುಕುವ, ವೃತ್ತಿ ಕೈಗೊಳ್ಳುವ ಹಾಗೂ ಸಂಚರಿಸುವ ಮುಕ್ತ ಅವಕಾಶವನ್ನು ನೀಡಲಾಗಿದೆ. ಒಂದೊಮ್ಮೆ ಎಲ್ಲಾ ರಾಜ್ಯಗಳು ಇಂಥ ಕಾನೂನು ಜಾರಿಗೆ ತರಲು ಹೊರಟರೆ ಅದು ಸಂವಿಧಾನ ವಿರೋಧಿಯಾಗಲಿದೆ. ಹೀಗಾಗಿ ಕರ್ನಾಟಕದ ಮುಖ್ಯಮಂತ್ರಿಯದ್ದು ಬುದ್ಧಿವಂತಿಕೆಯ ನಿರ್ಧಾರವಲ್ಲ’ ಎಂದಿದ್ದಾರೆ.

‘ಇಂಥದ್ದೇ ಪ್ರಯತ್ನಕ್ಕೆ ಕೈಹಾಕಿದ್ದ ಹರಿಯಾಣ ಸರ್ಕಾರದ ಮಸೂದೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಆದರೆ ಕರ್ನಾಟಕ ಇಂಥದ್ದೊಂದು ಯತ್ನಕ್ಕೆ ಏಕೆ ಕೈಹಾಕಿತು ಎಂಬುದೇ ಅರ್ಥವಾಗುತ್ತಿಲ್ಲ. ಸರ್ಕಾರದ ಈ ಕ್ರಮದಿಂದ ಅಲ್ಲಿನ ವಹಿವಾಟು ನೆರೆಯ ರಾಜ್ಯಗಳಾದ ತಮಿಳುನಾಡು, ಕೇರಳಕ್ಕೆ ಸ್ಥಳಾಂತರಗೊಳ್ಳುವ ಅಪಾಯವೂ ಇದೆ’ ಎಂದು ಹೇಳಿದ್ದಾರೆ.

ರಾಜ್ಯದ ಖಾಸಗಿ ಉದ್ಯಮಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ಅನುಮೋದನೆ ಪಡೆದಿತ್ತು. ಆದರೆ ನ್ಯಾಸ್‌ಕಾಮ್ ಸೇರಿದಂತೆ ಉದ್ಯಮದಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ರಾಜ್ಯದಿಂದ ವಲಸೆ ಹೋಗುವ ಬೆದರಿಕೆ ನಂತರ ಅದಕ್ಕೆ ತಾತ್ಕಾಲಿಕ ತಡೆ ನೀಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.