ತಿರುವನಂತಪುರ: ಕೇಂದ್ರೀಯ ವಿದ್ಯಾಲಯಗಳಲ್ಲಿ 2022–23ನೇ ಸಾಲಿನಿಂದ ಒಂದನೇ ತರಗತಿ ಪ್ರವೇಶಕ್ಕೆ ವಯೋಮಿತಿಯನ್ನು ಐದರಿಂದ ಆರಕ್ಕೆ ಏರಿಕೆ ಮಾಡಿರುವ ನಿರ್ಧಾರವನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯಬೇಕು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿರುವ ಅವರು, ವಯೋಮಿತಿ ಬದಲಾವಣೆಯಿಂದ ಐದರಿಂದ ಆರು ವರ್ಷದವರೆಗಿನ ಸಾಕಷ್ಟು ಮಕ್ಕಳು ಕೇಂದ್ರೀಯ ವಿದ್ಯಾಲಯಕ್ಕೆ ಪ್ರವೇಶ ಪಡೆಯಲು ಅನರ್ಹರಾಗುತ್ತಾರೆ. ಆದ್ದರಿಂದ ಈ ನಿರ್ಧಾರದಿಂದ ಕೇಂದ್ರ ಸರ್ಕಾರ ಹಿಂದೆ ಸರಿಯಬೇಕೆಂದು ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ವಯೋಮಿತಿ ಏರಿಕೆ ನಿರ್ಧಾರವನ್ನು ಮುಂಚಿತವಾಗಿಯೇ ತಿಳಿಸದ ಕೇಂದ್ರೀಯ ವಿದ್ಯಾಲಯ ಸಂಘಟನೆ ವಿರುದ್ಧ ಪೋಷಕರಿಂದಅಸಮಾಧಾನ ವ್ಯಕ್ತವಾಗಿದೆ. ಹಲವು ಶಾಲೆಗಳು ಈ ನೀತಿಯನ್ನು ಇನ್ನೂ ಜಾರಿಗೆ ತಂದಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.