ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿಯೇ ಸಿದ್ಧ: ಅಮಿತ್‌ ಶಾ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2019, 15:19 IST
Last Updated 17 ಡಿಸೆಂಬರ್ 2019, 15:19 IST
   

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಗೆ ಕೇಂದ್ರ ಸರ್ಕಾರ ಬದ್ಧಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಈ ಬಗ್ಗೆ ಮಾತನಾಡಿದಅವರು, ‘ನೆರೆ ರಾಷ್ಟ್ರಗಳ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ಯಾವುದೇ ಮಟ್ಟದ ವಿರೋಧ ವ್ಯಕ್ತವಾದರೂ, ಈ ಕಾಯ್ದೆಯನ್ನು ತಡೆಯಲು ಸಾಧ್ಯವಿಲ್ಲ’ಎಂದು ಸ್ಪಷ್ಟಪಡಿಸಿದ್ದಾರೆ.

'ವಿರೋಧ ಪಕ್ಷಗಳು ದೇಶದ ಜನರನ್ನು ತಪ್ಪು ದಾರಿಗೆ ಎಳೆಯಲು ಪ್ರಯತ್ನಿಸುತ್ತಿವೆ. ಇಲ್ಲಿನ ಅಲ್ಪಸಂಖ್ಯಾತರ ಪೌರತ್ವ ಕಸಿದುಕೊಳ್ಳುವ ಪ್ರಶ್ನೆಯೇ ಉದ್ಬವಿಸುವುದಿಲ್ಲ,'ಎಂದು ಶಾ ತಿಳಿಸಿದ್ದಾರೆ.

ADVERTISEMENT

‘ಪೌರತ್ವ ತಿದ್ದುಪಡಿ ಕಾಯ್ದೆಯ ಅಂಶಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಕಾಯ್ದೆಯಿಂದ ಜನರಿಗೆ ಯಾವುದೇ ರೀತಿಯ ಅನ್ಯಾಯ ಆಗುವುದಿಲ್ಲ. ನಾವು ಯಾರಿಗೂ ಅನ್ಯಾಯ ಮಾಡಲು ಬಯಸುವುದಿಲ್ಲ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.