ನವದೆಹಲಿ: ಕೇಂದ್ರ ಸರ್ಕಾರವು ತೈಲ ಬೆಲೆಯನ್ನು ಹೆಚ್ಚಿಸದ ದಿನವೇ ಅಪರೂಪವಾಗಿದೆ ಎಂದು ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.
ತೈಲ ಬೆಲೆ ಏರಿಕೆ ವಿಚಾರವಾಗಿ ಶುಕ್ರವಾರ ಟ್ವೀಟ್ ಮಾಡಿರುವ ಅವರು, 'ಕೇಂದ್ರ ಸರ್ಕಾರವು ತೈಲ ಬೆಲೆಯನ್ನು ಹೆಚ್ಚಿಸದ ದಿನವೇ ಅಪರೂಪವಾಗಿದೆ. ಪ್ರತಿ ದಿನವು ತೈಲ ಬೆಲೆಯನ್ನು ಏರಿಸಲೇಬೇಕೆಂಬ ಕೇಂದ್ರ ಸರ್ಕಾರದ ನಿಯಮವನ್ನು ಇದು ಸಾಬೀತುಪಡಿಸುತ್ತದೆ' ಎಂದು ವಾಗ್ದಾಳಿ ನಡೆಸಿದ್ದಾರೆ.
ಈಗಾಗಲೇ ಕರ್ನಾಟಕದ ಹಲವು ನಗರಗಳಲ್ಲಿ ಪೆಟ್ರೋಲ್ ದರವು ₹100ಕ್ಕಿಂತ ಹೆಚ್ಚಾಗಿದೆ.
ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬೆಲೆ ಹೆಚ್ಚಿಸಿದ್ದು, ಮಹಾರಾಷ್ಟ್ರ, ರಾಜಸ್ಥಾನ, ದೆಹಲಿ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ದರ ಶತಕ ತಲುಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.