ADVERTISEMENT

ದೇವಾಲಯಗಳ ನಿರ್ವಹಣೆಯನ್ನು ಧಾರ್ಮಿಕ ಮುಖಂಡರಿಗೆ ವಹಿಸುವ ಸಮಯ ಬಂದಿದೆ: ರವಿಶಂಕರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಸೆಪ್ಟೆಂಬರ್ 2024, 5:18 IST
Last Updated 22 ಸೆಪ್ಟೆಂಬರ್ 2024, 5:18 IST
<div class="paragraphs"><p>ಶ್ರೀ ಶ್ರೀ ರವಿಶಂಕರ್ ಗುರೂಜಿ</p></div>

ಶ್ರೀ ಶ್ರೀ ರವಿಶಂಕರ್ ಗುರೂಜಿ

   

ಬೆಂಗಳೂರು: ತಿರುಪತಿ ಲಾಡು ವಿವಾದದ ಕುರಿತು ಪ್ರತಿಕ್ರಿಯೆ ನೀಡಿರುವ ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್, 'ಈ ಘಟನೆಯು ಹಿಂದೂಗಳ ಮನಸ್ಸಿನಲ್ಲಿ ತೀವ್ರ ನೋವು ಹಾಗೂ ಆಕ್ರೋಶವನ್ನು ಉಂಟು ಮಾಡಿದೆ' ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, 'ಸ್ವ-ಹಿತಾಸಕ್ತಿಯ ಅಧಿಕಾರಿಗಳು, ನಿರ್ದಯಿ ವ್ಯಾಪಾರಸ್ಥರು ಮತ್ತು ರಾಜಕಾರಣಿಗಳ ಬದಲು ದೇವಾಲಯದ ನಿರ್ವಹಣೆಯನ್ನು ಧಾರ್ಮಿಕ ಮುಖಂಡರು ಹಾಗೂ ಭಕ್ತರಿಗೆ ವಹಿಸಿಕೊಡುವ ಸಮಯ ಬಂದಿದೆ' ಎಂದು ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

'ತಿರುಪತಿ ಲಾಡುವಿನ ಶುದ್ಧತೆ ಮತ್ತು ಕಲಬೆರಕೆ ಬಗ್ಗೆ ಸರ್ಕಾರ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು' ಎಂದು ಅವರು ಬಯಸಿದ್ದಾರೆ.

ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ದೇವಸ್ಥಾನದಲ್ಲಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರವು ತಿರುಪತಿಯ ಪ್ರಸಾದ ತಯಾರಿಕೆಗೆ ಅಗ್ಗದ ಬೆಲೆಯ ಕಲಬೆರಕೆ ತುಪ್ಪವನ್ನು ಖರೀದಿಸುವ ಮೂಲಕ ಟಿಟಿಡಿಯ ಪಾವಿತ್ರ್ಯಕ್ಕೆ ಧಕ್ಕೆ ತಂದಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಆರೋಪಿಸಿದ್ದರು. ಈ ವಿಷಯ ಭಾರಿ ವಿವಾದಕ್ಕೀಡಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.