ADVERTISEMENT

ಪಶ್ಚಿಮ ಬಂಗಾಳ: ರಾಜ್ಯಪಾಲರಿಂದ ಪರಿಸ್ಥಿತಿಯ ವರದಿ ಕೇಳಿದ ಕೇಂದ್ರ ಗೃಹ ಸಚಿವಾಲಯ

ಪಿಟಿಐ
Published 6 ಮೇ 2021, 10:09 IST
Last Updated 6 ಮೇ 2021, 10:09 IST
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯಪಾಲ ಜಗದೀಪ್‌ ಧನಖಡ್‌
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯಪಾಲ ಜಗದೀಪ್‌ ಧನಖಡ್‌   

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಕುರಿತು ವರದಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯವು ರಾಜ್ಯಪಾಲ ಜಗದೀಪ್‌ ಧನಖಡ್‌ ಅವರನ್ನು ಕೇಳಿದೆ. ಪ್ರಮುಖವಾಗಿ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರದಲ್ಲಿ ನಡೆದಿರುವ ಹಿಂಸಾಚಾರಗಳಿಗೆ ಸಂಬಂಧಿಸಿದಂತೆ ವರದಿ ಕೇಳಿರುವುದಾಗಿ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಈ ಹಿಂದೆ ಕೇಂದ್ರ ಗೃಹ ಸಚಿವಾಲಯವು ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರವನ್ನು ಕೇಳಿತ್ತು. ಆದರೆ, ಇನ್ನೂ ವರದಿ ತಲುಪಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶೀಘ್ರವಾಗಿ ಪರಿಸ್ಥಿತಿಯನ್ನು ಅವಲೋಕಿಸಿ ತಮ್ಮ ವರದಿಯನ್ನು ಸಚಿವಾಲಯಕ್ಕೆ ಸಲ್ಲಿಸುವಂತೆ ರಾಜ್ಯಪಾಲರಿಗೆ ತಿಳಿಸಲಾಗಿದೆ. ಚುನಾವಣೆ ಫಲಿತಾಂಶ ನಂತರದ ಹಿಂಸಾಚಾರದ ಬಗ್ಗೆ ತನಿಖೆ ಕೈಗೊಳ್ಳಲು ಹೆಚ್ಚು ಕಾರ್ಯದರ್ಶಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ನಾಲ್ಕು ಸದಸ್ಯರ ತಂಡವನ್ನು ಕೇಂದ್ರ ಗೃಹ ಸಚಿವಾಲಯವು ರಚಿಸಿದೆ.

ADVERTISEMENT

ಟಿಎಂಸಿ ಬೆಂಬಲಿಗರಿಂದ ಆರು ಮಂದಿ ಕಾರ್ಯಕರ್ತರ ಹತ್ಯೆ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ. ಆದರೆ, ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ಆರೋಪ ತಳ್ಳಿ ಹಾಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.