ಜೈಪುರ: 'ಅಸ್ಪೃಶ್ಯ' ಎಂಬ ಕಾರಣಕ್ಕೆ ನೂತನ ಸಂಸತ್ ಭವನದ ಶಂಕುಸ್ಥಾಪನೆಗೆ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಆಹ್ವಾನಿಸಿರಲಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದ್ದಾರೆ.
ಅಸ್ಪೃಶ್ಯರು ಅಡಿಪಾಯ ಹಾಕಿದರೆ, ಸಹಜವಾಗಿಯೇ ಅದನ್ನು ಗಂಗಾಜಲದಿಂದ ತೊಳೆಯಬೇಕು ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಖರ್ಗೆ ಟೀಕೆ ಮಾಡಿದ್ದಾರೆ.
ಚುನಾವಣಾ ಹೊಸ್ತಿಲಲ್ಲಿರುವ ರಾಜಸ್ಥಾನದ ಜೈಪುರದಲ್ಲಿ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಖರ್ಗೆ, ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿರಲಿಲ್ಲ. ಆದರೆ ಅನೇಕ ನಟ, ನಟರಿಗೆ ಆಹ್ವಾನ ನೀಡಲಾಗಿತ್ತು ಎಂದು ಹೇಳಿದರು.
ಇದು ರಾಷ್ಟ್ರಪತಿಗಳಿಗೆ ಮಾಡಿದ ಅವಮಾನ ಎಂದು ಅವರು ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.