ADVERTISEMENT

'ದರ್ಬಾರ್' ಅಲ್ಲ 'ಶೆಹನ್‌ಷಾ' ಪರಿಕಲ್ಪನೆ ಇದೆ: ಪ್ರಿಯಾಂಕಾ ಗಾಂಧಿ ವಾದ್ರಾ

ಪಿಟಿಐ
Published 25 ಜುಲೈ 2024, 11:17 IST
Last Updated 25 ಜುಲೈ 2024, 11:17 IST
<div class="paragraphs"><p>ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ</p></div>

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ

   

(ಪಿಟಿಐ ಚಿತ್ರ)

ನವದೆಹಲಿ: ರಾಷ್ಟ್ರಪತಿ ಭವನದ ಎರಡು ಪ್ರಮುಖ ಸಭಾಂಗಣಗಳಾದ 'ದರ್ಬಾರ್ ಹಾಲ್' ಮತ್ತು 'ಅಶೋಕ ಹಾಲ್' ಹೆಸರುಗಳನ್ನು ಮರುನಾಮಕರಣ ಮಾಡಲಾಗಿದೆ.

ADVERTISEMENT

ಈ ಕುರಿತು ಸಂಸತ್ ಆವರಣದಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ,'ಅಲ್ಲಿ ದರ್ಬಾರ್' ಪರಿಕಲ್ಪನೆ ಇಲ್ಲ. ಆದರೆ 'ಶೆಹನ್‌ಷಾ' ಪರಿಕಲ್ಪನೆ ಇದೆ' ಎಂದು ಹೇಳಿದ್ದಾರೆ.

ಆ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜೊತೆಗಿದ್ದರು. ಈ ಸಂಬಂಧ ವಿಡಿಯೊವನ್ನು 'ಪಿಟಿಐ' ಬಿಡುಗಡೆಗೊಳಿಸಿದೆ.

ರಾಷ್ಟ್ರಪತಿ ಭವನದ ಎರಡು ಪ್ರಮುಖ ಸಭಾಂಗಣಗಳ ಹೆಸರುಗಳನ್ನು ಬದಲಿಸಲಾಗಿದೆ. 'ದರ್ಬಾರ್ ಹಾಲ್' ಅನ್ನು 'ಗಣತಂತ್ರ ಮಂಟಪ' ಮತ್ತು 'ಅಶೋಕ ಹಾಲ್' ಅನ್ನು 'ಅಶೋಕ ಮಂಟಪ' ಎಂದು ಮರುನಾಮಕರಣ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.