ADVERTISEMENT

ಮುಸ್ಲಿಮರನ್ನು ಸೇರಿಸಿ, ಇಲ್ಲವೇ ಇತರರನ್ನು ಕೈಬಿಡಿ: ನಜೀಬ್ ಜಂಗ್

ಸಿಎಎ ಕಾಯ್ದೆ ಕುರಿತು ದೆಹಲಿ ಮಾಜಿ ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್ ಹೇಳಿಕೆ

ಏಜೆನ್ಸೀಸ್
Published 20 ಜನವರಿ 2020, 13:21 IST
Last Updated 20 ಜನವರಿ 2020, 13:21 IST
ದೆಹಲಿಯ ಮಾಜಿ ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್
ದೆಹಲಿಯ ಮಾಜಿ ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್    

ನವದೆಹಲಿ: ಪೌರತ್ವ (ತಿದ್ದುಪಡಿ)ಕಾಯ್ದೆಯಲ್ಲಿ ಮುಸ್ಲಿಮರನ್ನು ಸೇರಿಸಿ, ಇಲ್ಲವೇಇತರರನ್ನು ಕೈಬಿಡಿ ಎಂದು ದೆಹಲಿಯ ಮಾಜಿ ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್ ಒತ್ತಾಯಿಸಿದ್ದಾರೆ.

ಎಷ್ಟು ದಿನಗಳು ಈ ರೀತಿ ಪ್ರತಿಭಟನೆಗಳನ್ನು ಎದುರಿಸುತ್ತೀರಿ, ದೆಹಲಿಯಲ್ಲಿ ಬಸ್ಸುಗಳ ಓಡಾಟವಿಲ್ಲ, ಅಂಗಡಿ ಮುಂಗಟ್ಟು ತೆರೆಯುತ್ತಿಲ್ಲ, ನಷ್ಟದ ಪ್ರಮಾಣ ಹೆಚ್ಚುತ್ತಿದೆ, ವ್ಯಾಪಾರ ವಹಿವಾಟು ಇಲ್ಲವಾಗಿದೆ, ಆರ್ಥಿಕ ಸ್ಥಿತಿ ದಿನದಿಂದ ದಿನಕ್ಕೆ ತಳಮಟ್ಟಕ್ಕೆ ಹೋಗುತ್ತಿದೆ. ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸದೆಈಗಿನ ಸಮಸ್ಯೆಗೆ ಯಾವುದೇ ಪರಿಹಾರವಿಲ್ಲ ಎಂದು ಅವರು ಹೇಳಿದ್ದಾರೆ.

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಆವರಣದಲ್ಲಿ ಮಾತನಾಡಿದ ಅವರು, ಪೌರತ್ವ (ತಿದ್ದುಪಡಿ) ಕಾಯ್ದೆಸಮಗ್ರ ಬದಲಾವಣೆಯಾಗಬೇಕಿದೆ. ಪ್ರಧಾನಿ ನರೇಂದ್ರಮೋದಿ ಅವರು ಪ್ರತಿಭಟನಾಕಾರರನ್ನು ಮಾತುಕತೆಗೆ ಆಹ್ವಾನಿಸಿ ಸಮಸ್ಯೆಪರಿಹರಿಸಬೇಕು ಎಂದು ನಜೀಬ್ ಒತ್ತಾಯಿಸಿದ್ದಾರೆ.

ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬಂದಾಗಿನಿಂದಲೂ ದೆಹಲಿ ಸೇರಿದಂತೆ ರಾಷ್ಟ್ರದ ಹಲವೆಡೆ ದಿನನಿತ್ಯ ಪ್ರತಿಭಟನೆ ನಡೆಯುತ್ತಿದೆ. ಕೆಲವು ಕಡೆ ಪೊಲೀಸರು ಗುಂಡಿಗೆ ಪ್ರತಿಭಟನಾಕಾರರು ಬಲಿಯಾಗಿದ್ದಾರೆ. ಹಲವರು ಲಾಠಿಯಿಂದ ತೀವ್ರಗಾಯಗೊಂಡಿರುವ ಪ್ರಕರಣಗಳೂ ನಡೆದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.