ಮುಂಬೈ: ಬಂಡಾಯ ಶಾಸಕರು ಕಣ್ಣಲ್ಲಿ ಕಣ್ಣಿಟ್ಟು ನೋಡುವುದಿಲ್ಲ ಎಂದು ಮುಖ್ಯಮಂತ್ರಿ ಏಕನಾಥ ಶಿಂಧೆ ಬಣವನ್ನು ಉದ್ದೇಶಿಸಿ ಶಿವಸೇನಾ ನಾಯಕ ಆದಿತ್ಯ ಠಾಕ್ರೆ ಭಾನುವಾರ ಟೀಕಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನರ್ವೇಕರ್ ಆಯ್ಕೆಯಾದ ಬಳಿಕ ಆದಿತ್ಯ ಠಾಕ್ರೆ ಪ್ರತ್ರಿಯಿಸಿದ್ದಾರೆ.
ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.
'ಇಂದು ಬಂದ ಬಂಡಾಯ ಶಾಸಕರು ನಮ್ಮನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡುವುದಿಲ್ಲ. ಒಂದು ಹೋಟೆಲ್‌ನಿಂದ ಇನ್ನೊಂದು ಹೋಟೆಲ್‌ಗೆ ನೀವು ಎಷ್ಟು ಸಮಯ ಹೋಗುತ್ತೀರಿ?' ಎಂದು ಪ್ರಶ್ನಿಸಿದ್ದಾರೆ.
'ಈ ಶಾಸಕರು ಮುಂದೊಂದು ದಿನ ತಮ್ಮ ವಿಧಾನಸಭಾ ಕ್ಷೇತ್ರಗಳಿಗೆ ಹೋಗಬೇಕಾಗುತ್ತದೆ. ಅವರಿಗೆ ಜನರನ್ನು ಎದುರಿಸಲು ಸಾಧ್ಯವೇ ?' ಎಂದು ವಾಗ್ದಾಳಿ ನಡೆಸಿದ್ದಾರೆ.
ಶಿವಸೇನಾದ ಬಂಡಾಯ ನಾಯಕ ಏಕನಾಥ ಶಿಂಧೆ, ಬಿಜೆಪಿಯ ಬೆಂಬಲದೊಂದಿಗೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ ಮಹಾ ವಿಕಾಸ್ ಆಘಾಡಿ (ಎಂವಿಎ) ಸರ್ಕಾರ ಪತನಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.