ADVERTISEMENT

ಮಂಕಿಪಾಕ್ಸ್: ಕೇರಳದಲ್ಲಿ ಮೂರನೇ ಪ್ರಕರಣ ಪತ್ತೆ

ಪಿಟಿಐ
Published 22 ಜುಲೈ 2022, 9:02 IST
Last Updated 22 ಜುಲೈ 2022, 9:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತಿರುವನಂತಪುರ: ಕೇರಳದಲ್ಲಿ ಮಂಕಿಪಾಕ್ಸ್ ವೈರಸ್‌ನ ಮೂರನೇ ಪ್ರಕರಣ ಪತ್ತೆಯಾಗಿದೆ.

ಜುಲೈ 6ರಂದು ಯುಎಇನಿಂದ ಕೇರಳಕ್ಕೆ ಬಂದಿರುವ ಮಲಪ್ಪುರ ಜಿಲ್ಲೆಯ 35 ವರ್ಷದ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ.

ಸೋಂಕಿತ ವ್ಯಕ್ತಿಗೆ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.

ಅಲ್ಲದೆ ವ್ಯಕ್ತಿಯೊಂದಿಗೆ ನಿಕಟ ಸಂಪರ್ಕ ಹೊಂದಿದವರಲ್ಲಿ ಪ್ರತ್ಯೇಕವಾಸದಲ್ಲಿರಲು ಸೂಚಿಸಲಾಗಿದ್ದು, ನಿಗಾ ವಹಿಸಲಾಗುತ್ತಿದೆ.

ಕೊಲ್ಲಂ ಜಿಲ್ಲೆಯಲ್ಲಿ ಮೊದಲ ಮತ್ತು ಕಣ್ಣೂರು ಜಿಲ್ಲೆಯಲ್ಲಿ ಎರಡನೇ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿತ್ತು. ಈ ಪೈಕಿ ಕಣ್ಣೂರಿನ ಯುವಕ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಪ್ರಮಾಣಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.