ನವದೆಹಲಿ:ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಮತದಾನದ ಹಕ್ಕು ನೀಡಬಾರದು ಎಂದು ಯೋಗ ಗುರು ಬಾಬಾ ರಾಮ್‌ದೇವ್ ಹೇಳಿದ್ದಾರೆ.
ಎರಡಕ್ಕಿಂತ ಹೆಚ್ಚು ಮಕ್ಕಳಿರುವವರ ಮತದಾನದ ಹಕ್ಕನ್ನು ರದ್ದುಪಡಿಸಬೇಕು. ಅಂತಹವರು ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧ ಹೇರಬೇಕು. ಸರ್ಕಾರಿ ಶಾಲೆ, ಆಸ್ಪತ್ರೆಗಳನ್ನು ಬಳಸದಂತೆ ನಿರ್ಬಂಧ ವಿಧಿಸಬೇಕು. ಸರ್ಕಾರಿ ಉದ್ಯೋಗಗಳನ್ನೂ ನೀಡಬಾರದು. ಹೀಗೆ ಮಾಡಿದರೆ ಜನಸಂಖ್ಯೆ ತನ್ನಿಂದತಾನೇ ನಿಯಂತ್ರಣಕ್ಕೆ ಬರಲಿದೆ ಎಂದು ರಾಮ್‌ದೇವ್ ಹೇಳಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.