ADVERTISEMENT

ಪಂಜಾಬ್‌: ಕಬ್ಬಿಣದ ಪೆಟ್ಟಿಗೆಯಲ್ಲಿ ಮೂವರು ಹೆಣ್ಣುಮಕ್ಕಳ ಮೃತದೇಹ ಪತ್ತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಅಕ್ಟೋಬರ್ 2023, 7:31 IST
Last Updated 2 ಅಕ್ಟೋಬರ್ 2023, 7:31 IST
ಸಾವು (ಪ್ರಾತಿನಿಧಿಕ ಚಿತ್ರ)
ಸಾವು (ಪ್ರಾತಿನಿಧಿಕ ಚಿತ್ರ)   

ಪಂಜಾಬ್‌: ವಲಸೆ ಕಾರ್ಮಿಕರ ಮೂವರು ಹೆಣ್ಣುಮಕ್ಕಳು ಮನೆಯಲ್ಲಿಯೇ ಇದ್ದ ಕಬ್ಬಿಣ ಪೆಟ್ಟಿಗೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಪಂಜಾಬ್‌ನ ಜಲಂಧರ್‌ ಗ್ರಾಮದಲ್ಲಿ ನಡೆದಿದೆ. 

ಅಮೃತ್‌ ಕುಮಾರಿ (9), ಶಕ್ತಿ ಕುಮಾರಿ (7) ಮತ್ತು ಕಾಂಚನಾ ಕುಮಾರಿ (4) ಮೃತರು. 

ಬಾಲಕಿಯರು ಕಾಣೆಯಾದ ಬಗ್ಗೆ ಪೋಷಕರು ಪೊಲೀಸರಿಗೆ ದೂರು ನೀಡಿದ ಹಿನ್ನೆಲೆ ಅಧಿಕಾರಿಗಳು ರಾತ್ರಿಯಿಡೀ ಊರಿನಲ್ಲಿ ಹುಡುಕಾಡಿದ್ದಾರೆ. ಆದರೆ ಮಕ್ಕಳು ಪತ್ತೆಯಾಗದ ಕಾರಣ ಮನೆಯಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಕಬ್ಬಿಣ ಪೆಟ್ಟಿಗೆಯಲ್ಲಿ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಮೂವರು ಸಹೋದರಿಯರು ಆಟವಾಡುವ ವೇಳೆ ಪೆಟ್ಟಿಗೆಯಲ್ಲಿ ಅಡಗಿಕೊಂಡಾಗ ಲಾಕ್ ಆದ ಕಾರಣ ಉಸಿರುಕಟ್ಟಿ ಮೃತಪಟ್ಟಿರುವ ಸಾಧ್ಯತೆ ಇದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಜಲಂಧರ್‌ನ ಸ್ಥಳೀಯ ಪೊಲೀಸ್‌ ವರಿಷ್ಠಾಧಿಕಾರಿ ಮನಪ್ರೀತ್‌ ಸಿಂಗ್‌ ತಿಳಿಸಿದ್ದಾರೆ. 

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ, ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.