ನವಾಡ: ಬಿಹಾರದ ನವಾಡ ಜಿಲ್ಲೆಯಲ್ಲಿ ಮೆರವಣಿಗೆಯೊಂದರಲ್ಲಿ ಪ್ಯಾಲೆಸ್ಟೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಭಾನುವಾರ ಧಮೌಲಾ ಪ್ರದೇಶದಲ್ಲಿ ಮೊಹರಂ ಮೆರವಣಿಗೆಯಲ್ಲಿ ಕೆಲವರು ಪ್ಯಾಲೆಸ್ಟೀನ್ ಧ್ವಜವನ್ನು ಪ್ರದರ್ಶಿಸಿಸುತ್ತಿರುವ ವಿಡಿಯೊವೊಂದು ಹರಿದಾಡಿತ್ತು ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO) ಮಹೇಶ್ ಚೌಧರಿ ಪಿಟಿಐಗೆ ತಿಳಿಸಿದ್ದಾರೆ.
ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯ ಪೊಲೀಸರು ತನಿಖೆ ನಡೆಸಿ ಮೆರವಣಿಗೆಯ ವೇಳೆ ಪ್ಯಾಲೆಸ್ಟೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯದೆ ಮೆರವಣಿಗೆ ನಡೆಸಲಾಗಿದೆ. ಬಂಧಿತರಿಂದ ಪ್ಯಾಲೆಸ್ಟೀನ್ ಧ್ವಜವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚೌಧರಿ ಮಾಹಿತಿ ನೀಡಿದ್ದಾರೆ.
ಇದಕ್ಕೂ ಮೊದಲು, ಜುಲೈ 13 ರಂದು ದರ್ಬಂಗಾ ಜಿಲ್ಲೆಯಲ್ಲಿ ಮೊಹರಂಗೂ ಮುನ್ನ ನಡೆದ ಮೆರವಣಿಗೆಯಲ್ಲಿ ಪ್ಯಾಲೆಸ್ಟೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಬಿಹಾರ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.