ADVERTISEMENT

ಅಸ್ಸಾಂ | ಪ್ರತ್ಯೇಕ ಕಾರ್ಯಾಚರಣೆ-ಮೂವರು ಡ್ರಗ್ಸ್ ಪೆಡ್ಲರ್‌ಗಳ ಬಂಧನ: ಸಿಎಂ​

ಪಿಟಿಐ
Published 17 ಮೇ 2024, 5:20 IST
Last Updated 17 ಮೇ 2024, 5:20 IST
<div class="paragraphs"><p> ಡ್ರಗ್ಸ್ ಪೆಡ್ಲರ್‌ಗಳ ಬಂಧನ</p></div>

ಡ್ರಗ್ಸ್ ಪೆಡ್ಲರ್‌ಗಳ ಬಂಧನ

   

(ಚಿತ್ರ ಕೃಪೆ–@himantabiswa)

ಗುವಾಹಟಿ: ಅಸ್ಸಾಂನಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮೂವರು ಶಂಕಿತ ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಅವರಿಂದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

ADVERTISEMENT

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, 2 ದಿನಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಅಸ್ಸಾಂ ಪೊಲೀಸರು, ಅಸಂಖ್ಯಾತ ಯುವಕರ ಜೀವನವನ್ನು ರಕ್ಷಿಸಿದ್ದಾರೆ ಎಂದು ಬರೆದಿಕೊಂಡಿದ್ದಾರೆ.

ಮೊದಲ ಕಾರ್ಯಾಚರಣೆಯಲ್ಲಿ 2 ಲಕ್ಷ ವೈಎಬಿಎ ಮಾತ್ರೆಗಳೊಂದಿಗೆ ಒಬ್ಬ ವ್ಯಕ್ತಿಯನ್ನು ಕರೀಂಗಂಜ್ ಪೊಲೀಸರು ಬಂಧಿಸಿದ್ದಾರೆ. ಜೋರ್ಹತ್ ಮತ್ತು ಗೋಲಾಘಾಟ್ ಪೊಲೀಸರು ನಡೆಸಿದ 2ನೇ ಕಾರ್ಯಾಚರಣೆಯಲ್ಲಿ 358 ಗ್ರಾಂ ಹೆರಾಯಿನ್‌ನೊಂದಿಗೆ ಶಂಕಿತನನ್ನು ಬಂಧಿಸಿದ್ದಾರೆ.

3ನೇ ಕಾರ್ಯಾಚರಣೆಯಲ್ಲಿ ಕರೀಂಗಂಜ್ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದು, ಆತನಿಂದ 1.2 ಕೆ.ಜಿ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ. ಅಲ್ಲದೇ ಮಾದಕವಸ್ತುಗಳನ್ನು ನೆರೆಯ ರಾಜ್ಯಗಳಿಂದ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದೂ ಶರ್ಮಾ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.