ಕೋಲ್ಕತ್ತ: ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ್ ಜಿಲ್ಲೆಯ ಎಗ್ರಾದಲ್ಲಿ ಅಕ್ರಮ ಪಟಾಕಿ ಘಟಕದಲ್ಲಿ ನಡೆದ ಸ್ಫೋಟದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು (ಮಂಗಳವಾರ) ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮನೆಯೊಳಗೆ ಅಕ್ರಮ ಪಟಾಕಿ ತಯಾರಿಕಾ ಘಟಕ ಕಾರ್ಯನಿರ್ವಹಿಸುತ್ತಿತ್ತು. ಈ ವೇಳೆ ಸ್ಫೋಟ ಸಂಭವಿಸಿದ್ದು, ಮನೆ ಸಂಪೂರ್ಣ ಕುಸಿದಿದೆ ಎಂದು ತಿಳಿಸಿದ್ದಾರೆ.
ಘಟನೆ ಸಂಬಂಧ ತನಿಖೆ ಪ್ರಾರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.