ಸಿಂಗ್ಭೂಮ್: ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಿ ಮಾವೋವಾದಿಗಳು ನಡೆಸಿದ ಸ್ಫೋಟದಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಮೇರಲ್‌ಗಢ ಮತ್ತು ಹಾತಿಪುರ ಗ್ರಾಮದ ನಡುವಣ ಕಾಡಿನಲ್ಲಿ ಮಾವೋವಾದಿಗಳ ಅಡಗುತಾಣಗಳ ಮೇಲೆ ಸಿಆರ್‌ಪಿಎಫ್, ಜಾರ್ಖಂಡ್ ಜಾಗ್ವಾರ್ ಮತ್ತು ಜಿಲ್ಲಾ ಶಸಸ್ತ್ರ ಪೊಲೀಸ್ ಪಡೆ ನಡೆಸಿದ ಜಂಟಿ ಕಾರ್ಯಾಚರಣೆಯ ವೇಳೆ ಸ್ಫೋಟ ಸಂಭವಿಸಿದೆ.
ಇದನ್ನೂ ಓದಿ: ಬಾಲ್ಯವಿವಾಹ: 4 ಸಾವಿರ ಪ್ರಕರಣ, ಹಲವರ ಬಂಧನ ಸಾಧ್ಯತೆ
ಸಿಪಿಐ (ಮಾವೋವಾದಿ) ಸಂಘಟನೆಯ ನಾಯಕ ಮಿಸಿರ್ ಬೆಸರಾ ಸೇರಿದಂತೆ ಉನ್ನತ ನಾಯಕರು ಅಡಗಿರುವ ಬಗ್ಗೆ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಈ ಪೈಕಿ ಮಿಸಿರ್ ತಲೆಗೆ ಒಂದು ಕೋಟಿ ರೂಪಾಯಿ ಘೋಷಣೆ ಮಾಡಲಾಗಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್ ಮಾಹಿತಿ ನೀಡಿದ್ದಾರೆ.
ಗಾಯಾಳುಗಳನ್ನು ರಾಕೇಶ್ ಪಠಾಕ್, ಬಿ.ಡಿ. ಅನಲ್ ಮತ್ತು ಪಂಕಜ್ ಯಾದವ್ ಎಂದು ಗುರುತಿಸಲಾಗಿದೆ. ಅವರನ್ನು ಏರ್ ಲಿಫ್ಟ್ ಮಾಡಿ ರಾಂಚಿಯ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಚಿಕಿತ್ಸೆ ಒದಗಿಸಲಾಗುತ್ತಿದೆ.
ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಎಸ್‌ಪಿ ಅಶುತೋಷ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.