ADVERTISEMENT

ಮಹಿಳೆಯನ್ನು ಕೊಂದ ಹುಲಿ; ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಗ್ರಾಮಸ್ಥರ ಹಲ್ಲೆ

ಪಿಟಿಐ
Published 18 ಸೆಪ್ಟೆಂಬರ್ 2024, 14:33 IST
Last Updated 18 ಸೆಪ್ಟೆಂಬರ್ 2024, 14:33 IST
<div class="paragraphs"><p>ಹುಲಿ (ಸಂಗ್ರಹ ಚಿತ್ರ)</p></div>

ಹುಲಿ (ಸಂಗ್ರಹ ಚಿತ್ರ)

   

ನಾಗ್ಪುರ: ‘ಮಹಾರಾಷ್ಟ್ರದ ಪೆಂಚ್‌ ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿ ನಡೆಸಿದ ದಾಳಿಯಲ್ಲಿ 65 ವರ್ಷದ ಮಹಿಳೆ ಮೃತಪಟ್ಟಿದ್ದಾರೆ’ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಮೃತ ಮಹಿಳೆಯನ್ನು ನಿತಾ ಕುಂಭಾರೆ ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಹುಲಿ ದಾಳಿ ನಡೆದಿದೆ ಎಂದು ಪೆಂಚ್‌ ಮೀಸಲು ಅರಣ್ಯದ ಉಪನಿರ್ದೇಶಕ ಪ್ರಭುನಾಥ್ ಶುಕ್ಲಾ ಹೇಳಿದ್ದಾರೆ.

ADVERTISEMENT

ಘಟನೆಯ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ತೀವ್ರವಾಗಿ ಆಕ್ರೋಶಗೊಂಡ ಜಿಂಝಿರ್ಯಾ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ಇದರಲ್ಲಿ ಅರಣ್ಯ ಇಲಾಖೆಯ ಕೆಲ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಹಿರಿಯ ಅಧಿಕಾರಿಗಳು ಗ್ರಾಮಸ್ಥರೊಂದಿಗೆ ಸಭೆ ನಡೆಸಿದರು. ಹುಲಿಯನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಅಧಿಕಾರಿಗಳು ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ.

ಮೃತ ಮಹಿಳೆಯ ಕುಟುಂಬದವರಿಗೆ ತಕ್ಷಣ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಶುಕ್ಲಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.