ಚಂದ್ರಾಪುರ: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಚಿಮೂರ್ ಅರಣ್ಯ ಪ್ರದೇಶ ವ್ಯಾಪ್ತಿಯ ಗ್ರಾಮವೊಂದರಲ್ಲಿ ಹೆಣ್ಣು ಹುಲಿ ಹಾಗೂ ಎರಡು ಮರಿಗಳ ಮೃತದೇಹ ಸೋಮವಾರ ಪತ್ತೆಯಾಗಿದೆ. ವಿಷ ಸೇವನೆಯಿಂದ ಈ ಹುಲಿಗಳು ಸತ್ತಿರಬಹುದು ಎಂದು ಶಂಕಿಸಲಾಗಿದೆ.
ಹುಲಿಗಳ ಮೃತದೇಹ ಚರಂಡಿಯೊಂದರ ಪಕ್ಕದಲ್ಲಿ ಪತ್ತೆಯಾಗಿದ್ದು, ಇವುಗಳ ಸಾವಿನ ಕಾರಣ ಪತ್ತೆಹಚ್ಚಲು ತನಿಖೆಗೆ ಆದೇಶಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ತಡೋಬಾ ಅಂಧಾರಿ ಹುಲಿ ಸಂರಕ್ಷಿತಾರಣ್ಯವು ಮುಂಬೈಯಿಂದ 680 ಕಿ.ಮೀ. ದೂರದಲ್ಲಿರುವ ಚಂದ್ರಾಪುರ ಜಿಲ್ಲೆಯಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.