ADVERTISEMENT

ತಿರುಪತಿಯ ಇಸ್ಕಾನ್ ದೇಗುಲಕ್ಕೆ ಬಾಂಬ್ ಬೆದರಿಕೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2024, 6:40 IST
Last Updated 28 ಅಕ್ಟೋಬರ್ 2024, 6:40 IST
<div class="paragraphs"><p>ಬಾಂಬ್ ಬೆದರಿಕೆ</p></div>

ಬಾಂಬ್ ಬೆದರಿಕೆ

   

(ಸಾಂದರ್ಭಿಕ ಚಿತ್ರ)

ನವದೆಹಲಿ: ಆಂಧ್ರಪ್ರದೇಶದ ಮೂರು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಇದೀಗ ತಿರುಪತಿಯ ಇಸ್ಕಾನ್ ದೇಗುಲಕ್ಕೆ ಭಾನುವಾರ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

ADVERTISEMENT

ಈ ಬಗ್ಗೆ 'ಎನ್‌ಡಿಟಿವಿ' ವರದಿ ಮಾಡಿದೆ.

ಐಸಿಸ್ ಭಯೋತ್ಪಾದಕರು ದೇವಾಲಯವನ್ನು ಸ್ಫೋಟಿಸುತ್ತಾರೆ ಎಂದು ಇಮೇಲ್‌ನಲ್ಲಿ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ದೇವಾಲಯದ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.

ತಕ್ಷಣ ಕಾರ್ಯಪ್ರವೃತ್ತರಾದ ತಿರುಪತಿ ಪೊಲೀಸರು, ಬಾಂಬ್‌ ನಿಷ್ಕ್ರಿಯ ಹಾಗೂ ಶ್ವಾನ ದಳ ಸ್ಥಳಕ್ಕೆ ಧಾವಿಸಿದ್ದು, ದೇಗುಲದಲ್ಲಿ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಸ್ಫೋಟಕ ಅಥವಾ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಹಾಗಾಗಿ ಇದೊಂದು ಹುಸಿ ಬಾಂಬ್‌ ಬೆದರಿಕೆ ಎಂದು ಪೊಲೀಸರು ಶಂಕಿಸಿದ್ದಾರೆ.

ತಿರುಪತಿಯಲ್ಲಿ ಸತತ ಬಾಂಬ್ ಬೆದರಿಕೆ ಸಂದೇಶಗಳಿಂದ ಜನ ಭಯಭೀತರಾಗಿದ್ದಾರೆ. ಬೆದರಿಕೆ ಹಾಕುತ್ತಿದ್ದವರ ಪತ್ತೆಗೆ ಅಗತ್ಯ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶುಕ್ರವಾರ ಆಂಧ್ರಪ್ರದೇಶದ ಮೂರು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ಪರಿಶೀಲನೆ ಬಳಿಕ ಅವು ಹುಸಿ ಬೆದರಿಕೆ ಎಂಬುವುದು ದೃಢಪಟ್ಟಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.