ಕೋಲ್ಕತ್ತ: ಭಾರಿ ಜಿದ್ದಾಜಿದ್ದಿನಿಂದ ನಡೆದ ಪಶ್ಚಿಮ ಬಂಗಾಳದ ಗ್ರಾಮ ಪಂಚಾಯಿತಿಗಳ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ.
ಸಂಜೆ 4 ಗಂಟೆಯ ವರದಿ ಪ್ರಕಾರ, ಟಿಎಂಸಿ ಪಕ್ಷದ ಅಭ್ಯರ್ಥಿಗಳು 12,518 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, 3,620 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.
ಬಿಜೆಪಿಯು 2,781 ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದು, 915 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಗ್ರಾಮ ಪಂಚಾಯಿತಿಗಳ 63,229 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು.
ಎಡಪಕ್ಷಗಳ ಒಕ್ಕೂಟದ ಅಭ್ಯರ್ಥಿಗಳು 959 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದ್ದರೆ, ಸಿಪಿಐ(ಎಂ) ಪಕ್ಷವೊಂದೇ 910 ಕ್ಷೇತ್ರಗಳಲ್ಲಿ ಗೆದ್ದಿದ್ದು, 276ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಹೊಸದಾಗಿ ರಚನೆಯಾಗಿರುವ ಐಎಸ್‌ಎಫ್ ಪಕ್ಷದ 219, ಟಿಎಂಸಿ ಬಂಡಾಯ ಅಭ್ಯರ್ಥಿಗಳು ಸೇರಿ ಪಕ್ಷೇತರರು 718 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.