ನವದೆಹಲಿ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯಸಭೆ ಸದಸ್ಯ ಡೆರೆಕ್ ಒಬ್ರಯಾನ್ ಅವರನ್ನು ಮುಂಗಾರು ಅಧಿಕವೇಶನದ ಉಳಿದ ಅವಧಿಯ ಕಲಾಪದಿಂದ ಅಮಾನತು ಮಾಡಲಾಗಿದೆ.
ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಿರಂತರವಾಗಿ ಕಲಾಪಕ್ಕೆ ಅಡ್ಡಿಪಡಿಸಿ, ಸಭಾಪತಿ ಸ್ಥಾನಕ್ಕೆ ಅಗೌರವ ತೋರಿದ ಕಾರಣ ಒಬ್ರಯಾನ್ ಅಮಾನತಿಗೆ ರಾಜ್ಯಸಭೆಯ ಆಡಳಿತಾರೂಢ ಬಿಜೆಪಿ ನಾಯಕ ಪಿಯೂಷ್ ಗೋಯಲ್ ಮನವಿ ಮಾಡಿದರು. ಇದರಿಂದ ಕೆರಳಿದ ಟಿಎಂಸಿ ನಾಯಕರು ಸದನದ ಬಾವಿಗಿಳಿದು ಪ್ರತಿಭಟಿಸಿ, ಘೋಷಣೆಗಳನ್ನು ಕೂಗಲಾರಂಭಿಸಿದರು.
ಸ್ಪೀಕರ್ ಜಗದೀಪ್ ಧನಕರ್ 'ಅಶಿಸ್ತಿನ ಕಾರಣ' ಒಬ್ರಯಾನ್ ಅವರನ್ನು ಅಧಿವೇಶನದ ಉಳಿದ ಅವಧಿಗೆ ಅಮಾನತು ಮಾಡಿದರು.
ಸಂಸತ್ತಿನ ಮುಂಗಾರು ಅಧಿವೇಶನ ಆಗಸ್ಟ್ 11ಕ್ಕೆ ಕೊನೆಗೊಳ್ಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.