ಚೆನ್ನೈ: ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆಯನ್ನು ಎಐಎಡಿಎಂಕೆ ಹಾಗೂ ಪಿಎಂಕೆ ಪಕ್ಷಗಳು ಒಟ್ಟಿಗೆ ಎದುರಿಸಲು ನಿರ್ಧರಿಸಿವೆ.ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿರುವ ಆಡಳಿತಾರೂಢ ಎಐಎಡಿಎಂಕೆ, ಸ್ಥಾನ ಹೊಂದಾಣಿಕೆ ಅಂತಿಮಗೊಳಿಸಿದೆ.
ಪಿಎಂಕೆ ಪಕ್ಷವು ರಾಜ್ಯದ ಏಳು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದುಪಕ್ಷದ ಸಂಚಾಲಕ ಒ.ಪನ್ನೀರಸೆಲ್ವಂ ಹೇಳಿದರು. ಪಿಎಂಕೆ ಪಕ್ಷಕ್ಕೆ ಒಂದು ರಾಜ್ಯಸಭಾ ಸ್ಥಾನವನ್ನೂ ನೀಡಲು ನಿರ್ಧರಿಸಲಾಗಿದೆ. ವಿಧಾನಸಭಾ ಉಪಚುನಾವಣೆಗಳಲ್ಲಿ ಎಐಎಡಿಎಂಕೆ ಬೆಂಬಲಿಸಲು ಪಿಎಂಕೆ ನಿರ್ಧರಿಸಿದೆ.
2014ರ ಚುನಾವಣೆಯಲ್ಲಿ 8 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಡಿಎಂಕೆ, ಧರ್ಮಪುರಿ ಕ್ಷೇತ್ರವನ್ನು ಗೆಲ್ಲಲು ಮಾತ್ರ ಸಾಧ್ಯವಾಗಿತ್ತು.
ರಾಜ್ಯದಲ್ಲಿ ಬಿಜೆಪಿ ಜೊತೆಗೂ ಎಐಎಡಿಎಂಕೆಮೈತ್ರಿ ಮಾಡಿಕೊಳ್ಳುವ ಸಾಧ್ಯತೆಗಳಿವೆ.ಕಳೆದ ಬಾರಿ 8 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ ಬಿಜೆಪಿ, ಕನ್ಯಾಕುಮಾರಿಯಲ್ಲಿ ಮಾತ್ರ ಖಾತೆ ತೆರೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.