ಚೆನ್ನೈ: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ತಾವು ಉಪ ಮುಖ್ಯಮಂತ್ರಿ ಆಗುವ ಸಾಧ್ಯತೆಯ ವರದಿಗಳನ್ನು ತಳ್ಳಿಹಾಕಿದರು. ಅಲ್ಲದೇ ‘ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರೇ ಈ ವಿಷಯವನ್ನು ನಿರ್ಧರಿಸಬೇಕು’ ಎಂದರು.
ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನನ್ನು ರಾಜ್ಯದ ಉಪ ಮುಖ್ಯಮಂತ್ರಿ ಮಾಡಲಾಗುತ್ತದೆ ಎಂಬ ಊಹಾಪೋಹಗಳ ಕುರಿತು ಪ್ರಶ್ನಿಸುವ ಮಾಧ್ಯಮದವರಿಗೆ ನಾನು ಹೇಳುವುದೆಂದರೆ, ರಾಜ್ಯದ ಎಲ್ಲಾ ಸಚಿವರು, ಪಕ್ಷದ ಪದಾಧಿಕಾರಿಗಳು ಮತ್ತು ಯುವ ಘಟಕದ ಪದಾಧಿಕಾರಿಗಳು ಮುಖ್ಯಮಂತ್ರಿಗಳ ಉಪನಾಯಕರಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಹೇಳಿದರು.
ಇದಕ್ಕೂ ಮುನ್ನ ಡಿಎಂಕೆ ಯುವ ಘಟಕದ 45ನೇ ಸಂಸ್ಥಾಪನಾ ದಿನದಂದು ಮಾತನಾಡಿದ ಅವರು ‘ಯುವ ಘಟಕದ ಕಾರ್ಯದರ್ಶಿ ಹುದ್ದೆಯು ತಮ್ಮ ಹೃದಯಕ್ಕೆ ಹತ್ತಿರವಾದ ಕೆಲಸ’ ಎಂದರು. ಸದ್ಯ ಉದಯನಿಧಿ ಅವರು ಯುವಜನ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.