ADVERTISEMENT

ರೆಹಮಾನ್‌ ಸಂಗೀತ ಕಛೇರಿ ಆಯೋಜಕರ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2023, 14:26 IST
Last Updated 22 ಸೆಪ್ಟೆಂಬರ್ 2023, 14:26 IST
ಎ.ಆರ್‌.ರೆಹಮಾನ್‌
ಎ.ಆರ್‌.ರೆಹಮಾನ್‌   

 ಚೆನ್ನೈ:  ಸಂಗೀತ ಸಂಯೋಜಕ ಎ.ಆರ್‌.ರೆಹಮಾನ್‌ ಅವರ ಸಂಗೀತ ಕಛೇರಿ ‘ಮರಕ್ಕುಮ ನೆಂಜಮ್‌’ ಏರ್ಪಡಿಸಿದ್ದ ಆಯೋಜಕರ ವಿರುದ್ಧ ತಮಿಳುನಾಡು ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ.

ಸೆಪ್ಟೆಂಬರ್ 10ರಂದು ನಡೆದ ಕಾರ್ಯಕ್ರಮದಲ್ಲಿ  ಅವ್ಯವಸ್ಥೆ  ಮತ್ತು  ತೀವ್ರ ಜನದಟ್ಟಣೆ ಉಂಟಾಗಿತ್ತು. ಇದರಿಂದ ಪೂರ್ವ ಕರಾವಳಿ ರಸ್ತೆಯಲ್ಲಿ ವಿಪರೀತ ವಾಹನ ದಟ್ಟಣೆ ಉಂಟಾಗಿತ್ತು. ಈ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ.

ಎಸಿಟಿಸಿ ಈವೆಂಟ್ಸ್‌ ಸಂಸ್ಥಾಪಕ ಹೇಮಂತ್ ರಾಜ ಮತ್ತು ಇತರ ಮೂವರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿ  ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ADVERTISEMENT

ಕೇವಲ 20 ಸಾವಿರ ಆಸನಗಳ ವ್ಯವಸ್ಥೆ ಇದ್ದರೂ ಆಯೋಜಕರು ಅದರ ದುಪ್ಪಟ್ಟು ಸಂಖ್ಯೆಯಲ್ಲಿ ಟಿಕೆಟ್‌ ಹಂಚಿದ್ದರು. ಕಾರ್ಯಕ್ರಮದಲ್ಲಿ ಸುಮಾರು 50,000 ಜನರು ಪಾಲ್ಗೊಂಡಿದ್ದರು ಎನ್ನಲಾಗಿದೆ. ಈ ಬಗ್ಗೆ 10 ದಿನಗಳ ಕಾಲ ತನಿಖೆ ನಡೆಸಿದ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.