ನವದೆಹಲಿ: ತಮಿಳುನಾಡಿನ ಕಲ್ಲಕುರಿಚಿಯ ಚಿನ್ನಸೇಲಂನಲ್ಲಿರುವ ಖಾಸಗಿ ವಸತಿ ಶಾಲೆಯೊಂದರ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣದಲ್ಲಿ ಮರು ಮರಣೋತ್ತರ ಪರೀಕ್ಷೆ ನಡೆಸುವ ವೈದ್ಯರ ತಂಡಕ್ಕೆ ತನ್ನ ಆಯ್ಕೆಯ ವೈದ್ಯರನ್ನು ಸೇರಿಸುವಂತೆ ಆಕೆಯ ತಂದೆ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರಿದ್ದ ನ್ಯಾಯಪೀಠವು ಈ ಅರ್ಜಿಯ ವಿಚಾರಣೆ ನಡೆಸಿದೆ. ‘ಮರು ಮರಣೋತ್ತರ ಪರೀಕ್ಷೆಗಾಗಿ ಹೈಕೋರ್ಟ್ ವೈದ್ಯರ ಸಮಿತಿಯನ್ನು ರಚಿಸಿದೆ. ನಿಮಗೆ ಹೈಕೋರ್ಟ್ ಮೇಲೆ ನಂಬಿಕೆ ಇಲ್ಲ. ಕ್ಷಮಿಸಿ, ನಾವು ಇದಕ್ಕೆ ಅವಕಾಶ ನೀಡುವುದಿಲ್ಲ’ ಎಂದು ನ್ಯಾಯಪೀಠ ಹೇಳಿದೆ.
ಮರು ಮರಣೋತ್ತರ ಪರೀಕ್ಷೆಗೆ ಮದ್ರಾಸ್ ಹೈಕೋರ್ಟ್ಸೋಮವಾರ ಆದೇಶಿಸಿತ್ತು. ಆದರೆ ವಿದ್ಯಾರ್ಥಿನಿಯ ತಂದೆಯ ಈ ಮನವಿಯನ್ನು ಪುರಸ್ಕರಿಸಿರಲಿಲ್ಲ.
ಬಾಲಕಿಯ ಸಾವಿಗೆ ನ್ಯಾಯ ದೊರೆಯಬೇಕೆಂದು ಆಗ್ರಹಿಸಿ ಕಲ್ಲಕುರಿಚಿಯಲ್ಲಿ ಈಚೆಗೆ ನಡೆದಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.
ಇವನ್ನೂ ಓದಿ..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.