ADVERTISEMENT

ಟೂಲ್‌ಕಿಟ್ ಪ್ರಕರಣ: ದಿಶಾ ರವಿಗೆ ಮೂರು ದಿನಗಳ ನ್ಯಾಯಾಂಗ ಬಂಧನ

ಏಜೆನ್ಸೀಸ್
Published 19 ಫೆಬ್ರುವರಿ 2021, 12:24 IST
Last Updated 19 ಫೆಬ್ರುವರಿ 2021, 12:24 IST
ದಿಶಾ ರವಿ
ದಿಶಾ ರವಿ   

ನವದೆಹಲಿ: ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ದೆಹಲಿಯ ಪಟಿಯಾಲ ಹೌಸ್‌ ನ್ಯಾಯಾಲಯ ಮೂರು ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸುವ ‘ಟೂಲ್‌ಕಿಟ್‌’ ಹಂಚಿಕೊಂಡ ಆರೋಪದ ಮೇಲೆ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರ ಬಂಧನವಾಗಿದೆ.

ಇದಕ್ಕೂ ಮೊದಲು ತನಿಖೆಗೆ ಸಂಬಂಧಿಸಿದ ಸಾಮಗ್ರಿಗಳನ್ನು ಪೊಲೀಸರು ಮಾಧ್ಯಮಗಳಿಗೆ ಸೋರಿಕೆ ಮಾಡದಂತೆ ತಡೆಯಲು ದಿಶಾ ರವಿ ಅವರು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದರು.

ADVERTISEMENT

ತನ್ನ ಮತ್ತು ಮೂರನೇ ವ್ಯಕ್ತಿಗಳ ನಡುವೆ ನಡೆದಿರುವ ವಾಟ್ಸ್‌ಆ್ಯಪ್‌ ಸಂದೇಶ ಸೇರಿದಂತೆ ಯಾವುದೇ ಖಾಸಗಿ ಚಾಟ್‌ಗಳ ವಿಷಯಗಳನ್ನು ಪ್ರಕಟಿಸದಂತೆ ಮಾಧ್ಯಮಗಳ ಮೇಲೆ ತಡೆ ಹೇರುವಂತೆಯೂ ಅರ್ಜಿಯಲ್ಲಿ ಕೋರಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.