ಸಲಿಂಗ ವಿವಾಹ: ಕಾನೂನಿನ ಮಾನ್ಯತೆ ಇಲ್ಲ ಎಂದ ಸುಪ್ರೀಂ ಕೋರ್ಟ್ | ತಮಿಳುನಾಡು | ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; 9 ಮಂದಿ ಸಾವು | ಐ.ಟಿ ದಾಳಿಯಲ್ಲಿ ಸಿಕ್ಕಿರುವುದು ಬಿಜೆಪಿಯ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್ | ಮತ್ತಷ್ಟು ಪ್ರಮುಖ ಸುದ್ದಿಗಳು...
ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ 21 ಅರ್ಜಿಗಳನ್ನು ಸಾಂವಿಧಾನಿಕ ಪೀಠ ವಜಾಗೊಳಿಸಿದೆ. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ಚೆನ್ನೈ: ತಮಿಳುನಾಡಿನಲ್ಲಿ ವಿರುಧನಗರ ಜಿಲ್ಲೆಯ ಶಿವಕಾಶಿ ಬಳಿಯ ಕಮ್ಮಪಟ್ಟಿ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು: ‘ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಪತ್ತೆಯಾಗಿರುವ ಹಣ ಬಿಜೆಪಿಗೆ ಸೇರಿದ್ದು. ಆ ಹಣಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವ ಸಂಬಂಧವೂ ಇಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರು: ಆಡಳಿತದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಅಧಿಕಾರಿಗಳು ಮತ್ತು ಸಚಿವರು ಕಡತಗಳಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಟಿಪ್ಪಣಿ ಹಾಕುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಅವರು ಲಘು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಕುರಿತು ಅವರು ಮಾಹಿತಿ ನೀಡಿದ್ದಾರೆ.
ಜೆರುಸಲೇಂ: ಹಮಾಸ್ ಬಂಡುಕೋರರು ನಾಶವಾಗುವವರೆಗೂ ಯುದ್ಧ ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇಂದು (ಮಂಗಳವಾರ) ಪುನರುಚ್ಚರಿಸಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳೊಂದಿಗೆ ಮಂಗಳವಾರ ಸಭೆ ನಡೆಸಿ, 2035ರ ಹೊತ್ತಿಗೆ ಬಾಹ್ಯಾಕಾಶ ನಿಲ್ದಾಣ ಸಿದ್ಧಪಡಿಸುವುದು ಹಾಗೂ 2040ರ ಹೊತ್ತಿಗೆ ಚಂದ್ರನ ಅಂಗಳಕ್ಕೆ ಮಾನವನನ್ನು ಕಳುಹಿಸುವ ಗುರಿಯನ್ನು ಹೊಂದುವಂತೆ ಸಲಹೆ ನೀಡಿದ್ದಾರೆ.
ಐಜ್ವಾಲ್: ‘ಇಂಡಿಯಾ’ ಮೈತ್ರಿಕೂಟವು ದೇಶದ ಶೇ 60ರಷ್ಟು ಭಾಗವನ್ನು ಪ್ರತಿನಿಧಿಸುತ್ತದೆ. ಇದು ಬಿಜೆಪಿಗಿಂತ ಹೆಚ್ಚು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಬಿಜಾಪುರ: ಭದ್ರಾತಾ ಪಡೆಗಳು ಹಾಗೂ ನಕ್ಸಲರ ನಡುವೆ ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ನಕ್ಸಲ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಚೆನ್ನೈ: ಸನಾತನ ಧರ್ಮ ನಿರ್ಮೂಲನೆ ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ನನ್ನ ದೃಷ್ಟಿಕೋನವನ್ನು ವ್ಯಕ್ತಪಡಿಸಿದ್ಧೇನೆ ಎಂದು ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮದ್ರಾಸ್ ಹೈಕೋರ್ಟ್‌ನಲ್ಲಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.